ರಾಯಚೂರು: ಜಿಲ್ಲೆಯಲ್ಲಿ ಬರ ಪರಿಶೀಲನೆ ವೇಳೆ ಮಾಜಿ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳನ್ನು ತರಾಟೆಗೆ ತೆಗದುಕೊಂಡಿದ್ದಾರೆ. ಲಿಂಗಸುಗೂರು ತಾಲೂಕಿನ ಚತ್ತರ ತಾಂಡಾದಲ್ಲಿ ಘಟನೆ ನಡೆದಿದೆ. ಗ್ರಾಮಗಳಿಗೆ ಸರಿಯಾಗಿ ನೀರು ಪೂರೈಸದಿರುವುದಕ್ಕೆ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ನೀರು ಪೂರೈಸದೇ ಕತ್ತೆ ಕಾಯ್ತೀರಾ ಅಂತ ತಹಶೀಲ್ದಾರ್ ಚಂದ್ರಕಾಂತ್ರನ್ನ ಗೋವಿಂದ ಕಾರಜೋಳ ತರಾಟೆ ತೆಗೆದುಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬರ ಪರಿಶೀಲನಾ ಪ್ರವಾಸ ನಡೆಯುತ್ತಿದ್ದು, ಮಾಜಿ ಸಚಿವ ಗೋವಿಂದ ಕಾರಜೋಳ ಅವರೂ ಭಾಗವಹಿಸಿದ್ದಾರೆ.