Friday, December 27, 2024

ಸಿಎಂ ಕ್ಯಾಬಿನೆಟ್ ಸೇರ್ತಾರಾ ಫಾರೂಕ್..?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ವೇಳೆ ಅಲ್ಪಸಂಖ್ಯಾತರನ್ನ ಮತ್ತೆ ಪಕ್ಷದತ್ತ ಸೆಳೆಯಲು ಜೆಡಿಎಸ್​ ಹೊಸ ಪ್ಲಾನ್ ಮಾಡ್ತಿದೆ. ವಿಧಾನ ಪರಿಷತ್ ಸದಸ್ಯ ಬಿ. ಎಂ. ಫಾರೂಕ್ ಅವರಿಗೆ ಸಚಿವ ಸ್ಥಾನ ನೀಡಲು ಜೆಡಿಎಸ್​ ಚಿಂತನೆ ನಡೆಸಿದೆ. ಬಿ.ಎಂ.ಫಾರೂಕ್ ಸಿಎಂ ಕ್ಯಾಬಿನೆಟ್ ಸೇರುವ ಸಾಧ್ಯತೆ ಇದ್ದು, ಈ ಬಗ್ಗೆ ಜೆಡಿಎಸ್ ವರಿಷ್ಠರು ಚರ್ಚೆ ನಡೆಸಿದ್ದಾರೆ.

ಅಲ್ಪಸಂಖ್ಯಾತರನ್ನ ಮತ್ತೆ ಪಕ್ಷದತ್ತ ಸೆಳೆಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಂಪುಟ ವಿಸ್ತರಣೆ ವೇಳೆ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಜೆಡಿಎಸ್ ನಲ್ಲಿ ಈಗಾಗಲೇ‌ ಒಕ್ಕಲಿಗ, ಕುರುಬ, ಲಿಂಗಾಯಿತ ಸಮುದಾಯಕ್ಕೆ ಸ್ಥಾನ ನೀಡಾಗಿದೆ. ಹೀಗಾಗಿ ಸಂಪುಟ ವಿಸ್ತರಣೆ ವೇಳೆ ಅಲ್ಪಸಂಖ್ಯಾತರಿಗೆ ಮಣೆ ಹಾಕುವ ಸಾಧ್ಯತೆ ಇದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಜೆಡಿಎಸ್ ನಿಂದ ದೂರ ಉಳಿದಿದ್ದರು. ಆ ಡ್ಯಾಮೇಜ್ ಕಂಟ್ರೋಲ್​​ಗೆ ಫಾರೂಕ್​ಗೆ ಸಚಿವ ಸ್ಥಾನ‌ ನೀಡಲು ಚಿಂತನೆ ನಡೆಸಲಾಗಿದೆ.

RELATED ARTICLES

Related Articles

TRENDING ARTICLES