ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಉಂಟಾಗುತ್ತಿದೆ. ಇದೀಗ ‘ಮೈತ್ರಿ’ ಉಳಿಸಿಕೊಳ್ಳಲು ಡಿಸಿಎಂ ಸೇರಿದಂತೆ ಕಾಂಗ್ರೆಸ್ ಪಕ್ಷದ ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಕೂಡ ಈಗ ರಾಜೀನಾಮೆ ನೀಡಿದ್ದಾರೆ. ಎಲ್ಲಾ ಸಚಿವರು ರಾಜೀನಾಮೆ ನೀಡಿ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡಿ ಸರ್ಕಾರ ಉಳಿಸಿಕೊಳ್ಳಲು ದೋಸ್ತಿ ನಾಯಕರು ಸರ್ಕಸ್ ಮಾಡುತ್ತಿದ್ದಾರೆ. ಯಾರೂ ಊಹಿಸಿರದ ಕ್ಷಿಪ್ರ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದ್ದು, ಇಡೀ ದೇಶದ ಗಮನ ಸೆಳೆದಿದೆ.