ಬೆಂಗಳೂರು : ರಾಜ್ಯ ರಾಜಕಾರಣದಲ್ಲೀಗ ರಾಜೀನಾಮೆ ಪರ್ವ. ಇಂದು ಶಿವಾಜಿ ನಗರ ಶಾಸಕ ರೋಷನ್ ಬೇಗ್ ಕೂಡ ರಾಜೀನಾಮೆ ನೀಡಿದ್ದಾರೆ. ಇದು ನಿರೀಕ್ಷಿತವೂ ಆಗಿತ್ತು.
ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ಅಮಾನತುಗೊಂಡಿರುವ ರೋಷನ್ ಬೇಗ್ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರ ವಾರ್ನಿಂಗ್ಗೂ ಬಗ್ಗದೇ ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಅಂತ ತಿಳಿದುಬಂದಿದೆ.
ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, ನಾನು ಖುದ್ದಾಗಿ ಸ್ಪೀಕರ್ಗೆ ರಾಜೀನಾಮೆ ಸಲ್ಲಿಸಿದ್ದೇನೆ ಅಂತ ಹೇಳಿದ್ದಾರೆ.
ಇನ್ನು ರಾಜ್ಯ ರಾಜಕರಣಕ್ಕೆ ಸಂಬಂಧಿಸಿದಂತೆ ಬರೀ ರಾಜೀನಾಮೆಯದ್ದೇ ಸುದ್ದಿ..! ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಪಕ್ಷೇತರ ಶಾಸಕರಾದ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಸಚಿವ ಸ್ಥಾನಕ್ಕೆ ಗುಡ್ ಬೈ ಹೇಳಿದ್ರು.
ಈ ರಾಜೀನಾಮೆ ಪರ್ವದಿಂದ ಮೈತ್ರಿ ನಾಯಕರು ಕಂಗಾಲಾಗಿದ್ದು, ಏನಾದ್ರು ಮಾಡಿ ಸರ್ಕಾರ ಉಳಿಸಿಕೊಳ್ಳಲೇ ಬೇಕು ಅಂತ ಸಚಿವ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಅತೃಪ್ತರಿಗೆ ಮಂತ್ರಿಗಿರಿ ನೀಡಲು ಮುಂದಾಗಿದ್ದಾರೆ.
ಶಾಸಕ ರೋಷನ್ ಬೇಗ್ ರಾಜೀನಾಮೆ
TRENDING ARTICLES