ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ್ದ ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ಮಸೂದೆ 2019 ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದು, ಕಣಿವೆ ರಾಜ್ಯವನ್ನು ಎರಡು ಭಾಗ ಮಾಡಿ ಕೇಂದ್ರಾಡಳಿತ ಪ್ರದೇಶ ಅಂತ ಘೋಷಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿ, ಲಡಾಖ್ ಮತ್ತು ಜಮ್ಮು -ಕಾಶ್ಮೀರ ಎನ್ನುವ ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಕ್ಕೆ ಅವಕಾಶ ಮಾಡಿಕೊಡುವ ಕಾಶ್ಮೀರ ಪುನರ್ ರಚನೆ ಮಸೂದೆಗೆ ರಾಜ್ಯಸಭೆಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ.
370ನೇ ವಿಧಿ ರದ್ದು ; ಜಮ್ಮು-ಕಾಶ್ಮೀರ ಇನ್ಮುಂದೆ ಕೇಂದ್ರಾಡಳಿತ ಪ್ರದೇಶ..!
ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ರದ್ದು, ಮುಂದೇನು?