Thursday, December 26, 2024

ಇಂದು ಪ್ರಜಾಪ್ರಭುತ್ವದ ಕರಾಳ ದಿನ : ಮೆಹಬೂಬಾ ಮುಫ್ತಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ಕಲಂ 370ಯನ್ನು ರದ್ದು ಮಾಡಿರುವ ಕೇಂದ್ರ ಸರ್ಕಾರದ ನಿಲುವನ್ನು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಖಂಡಿಸಿದ್ದಾರೆ. ಪ್ರಜಾಪ್ರಭುತ್ವದ ಪಾಲಿಗೆ ಇಂದು ಕರಾಳ ದಿನ, ಕೇಂದ್ರ ಸರ್ಕಾರ ಸಂವಿಧಾನದ ಹತ್ಯೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಮುಫ್ತಿ ಟ್ವೀಟ್​​ ಮಾಡಿದ್ದಾರೆ.
ಇದು ಸಂವಿಧಾನದ ಕತ್ತಲ ದಿನ, ಕಾಶ್ಮೀರಕ್ಕೆ ಕೊಟ್ಟ ಮಾತನ್ನು ಭಾರತ ಉಳಿಸಿಕೊಳ್ಳಲು ಆಗಿಲ್ಲ. ಕೇಂದ್ರ ಸರ್ಕಾರದ ನಿರ್ಧಾರ ಅನೈತಿಕ ಮತ್ತು ಸಂವಿಧಾನಬಾಹಿರವಾಗಿದೆ. ಜಮ್ಮು ಮತ್ತು ಕಾಶ್ಮೀರದ ಜನರಲ್ಲಿ ಭಯ ಹುಟ್ಟಿಸಿ ಅಲ್ಲಿನ ಭೂಪ್ರದೇಶವನ್ನು ವಶಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಅವರು ಟ್ವಿಟರ್​ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

RELATED ARTICLES

Related Articles

TRENDING ARTICLES