ಬೆಂಗಳೂರು : ಭೀಕರ ಪ್ರವಾಹದ ಬಗ್ಗೆ ಸಿಎಂ ಬಿಎಸ್ವೈ ಇಂದು ಸುದ್ದಿಗೋಷ್ಠಿ ನಡೆಸಿ ಪ್ರವಾಹದ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದ್ರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ರಾಜ್ಯವನ್ನ ಕಾಡುತ್ತಿರುವ ಪ್ರವಾಹದ ಬಗ್ಗೆ ಮಾಹಿತಿ ನೀಡಿದ್ರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಕಳೆದ 45 ವರ್ಷಗಳಲ್ಲೇ ಇದು ರಣಭೀಕರ ಪ್ರವಾಹ. ರಾಜ್ಯ ಇಂತಹ ಭೀಕರ ಪ್ರವಾಹ ಕಂಡಿರಲಿಲ್ಲ. 16 ಜಿಲ್ಲೆಗಳ 80 ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಸದ್ಯದ ಮಾಹಿತಿ ಪ್ರಕಾರ 20 ಜನರು ದುರ್ಮರಣ ಹೊಂದಿದ್ದು ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದುವರೆಗೂ 2,35,105 ಜನರನ್ನು ಹಾಗೂ 40 ಸಾವಿರಕ್ಕೂ ಹೆಚ್ಚು ಜಾನುವಾರುಗಳನ್ನು ಸ್ಥಳಾಂತರ ಮಾಡಲಾಗಿದೆ. 624 ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.
ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ಕೆಂದ್ರ ಸರ್ಕಾರಕ್ಕೆ ವಿವರಿಸಲಾಗಿದೆ. ನಿನ್ನೆ ಕೇಂದ್ರ ಸರ್ಕಾರ 100 ಕೋಟಿ ತುರ್ತಾಗಿ ಬಿಡುಗಡೆ ಮಾಡಿದೆ. ಎಲ್ಲರ ಸಹಕಾರದಿಂದ ಶಾಶ್ವತ ಪರಿಹಾರಕ್ಕೆ ವ್ಯವಸ್ಥೆ ಮಾಡುತ್ತೇವೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಪರಸ್ಥಿತಿ ಸುಧಾರಣೆಯಾಗಲಿದೆ. ನಿರಾಶ್ರಿತರು ಎದೆಗುಂದಬೇಡಿ ಅಂತಾ ಸಿಎಂ ಇದೇ ವೇಳೆ ಮನವಿ ಮಾಡಿದ್ರು.