ಮೈಸೂರು: ಭೀಕರ ಪ್ರವಾಹಕ್ಕೆ ರಾಜ್ಯ ತತ್ತರಿಸಿದೆ. ಜನ ಮನೆ ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಒಂದೆಡೆ ಜನತೆ ಸಂಕಷ್ಟದಲ್ಲಿದ್ರೆ ಮತ್ತೊಂದೆಡೆ ಸಂತ್ರಸ್ತರಿಗೆ ನೆರವಾಗುವ ಕಾರ್ಯವೂ ನಡೆಯುತ್ತಿದೆ. ಈಗಾಗಲೇ ಸರ್ಕಾರ, ಸೆಲೆಬ್ರಿಟಿಗಳು ಸಂಕಷ್ಟದಲ್ಲಿರುವವರಿಗೆ ನೆರವಾಗುವಂತೆ ಕೇಳಿಕೊಂಡಿದ್ದಾರೆ. ಇನ್ಫೋಸಿಸ್ ಸಂಸ್ಥಾಪಕಿ ಸುಧಾಮೂರ್ತಿಯವ್ರು ಮುಖ್ಯಮಂತ್ರಿ ಪರಿಹಾರ ನಿಧಿಗೆ 10ಕೋ.ರೂಗಳನ್ನು ನೀಡಿದ್ದಾರೆ. ಇದೀಗ ಪೇಜಾವರ ಮಠಾಧೀಶ ಶ್ರೀ ವಿಶ್ವೇಶ್ವರ ತೀರ್ಥ ಸ್ವಾಮೀಜಿಯವ್ರು ಪ್ರವಾಹದಿಂದ ಸಂಕಷ್ಟದಲ್ಲಿರುವ ಜನರಿಗೆ 15 ಲಕ್ಷ ರೂ.ನೆರವು ನೀಡೋದಾಗಿ ಘೋಷಣೆ ಮಾಡಿದ್ದಾರೆ.
ಇಂದು ಮೈಸೂರು ಸರಸ್ವತಿಪುರಂನ ಕೃಷ್ಣಧಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವ್ರು, ರಾಜ್ಯದ ಹಲವೆಡೆ ಪ್ರವಾಹದಿಂದ ಪರಿಸ್ಥಿತಿ ಬಿಗಡಾಯಿಸಿದೆ. ಜನತೆ ಕಷ್ಟದಲ್ಲಿದೆ. ಹೀಗಾಗಿ ಸಾರ್ವಜನಿಕರು, ಭಕ್ತರು ಅವರ ಕಷ್ಟಗಳಿಗೆ ಸ್ಪಂದಿಸಿ ಎಂದು ಮನವಿ ಮಾಡಿದ್ದಾರೆ. ಸದ್ಯ ಬೆಳಗಾವಿಯ ಒಂದು ಪ್ರದೇಶವನ್ನು ಆಯ್ಕೆ ಮಾಡಿ ಪರಿಹಾರ ಕಾರ್ಯ ನಡೆಸಲಾಗುವುದು. ಚಾತುರ್ಮಸ್ಯದ ಬಳಿಕ ಧಾರವಾಡ, ಹುಬ್ಬಳ್ಳಿ, ಬೆಳಗಾವಿಗಳಲ್ಲಿ ಪಾದಯಾತ್ರೆ ಕೈಗೊಳ್ಳಲಾಗುವುದು ಎಂದು ಶ್ರೀಗಳು ಹೇಳಿದ್ದಾರೆ.