ರಾಜ್ಯದಲ್ಲಿ ಇದೇ ಮೊದಲಬಾರಿಗೆ ಸಚಿವರೇ ಇಲ್ಲದೆ ಸ್ವಾತಂತ್ರ್ಯೋತ್ಸವ

23
1335

ಬೆಂಗಳೂರು : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಇಲ್ಲದೆ ಸ್ವಾತಂತ್ರ್ಯೋತ್ಸವವನ್ನು ಆರಚಣೆ ಮಾಡಲಾಗುತ್ತಿದೆ.

ಕಳೆದ ತಿಂಗಳು ಹೊಸದಾಗಿ ಆಡಳಿತಕ್ಕೆ ಬಂದಿರುವ ಬಿಜೆಪಿ ಸರ್ಕಾರ ಇನ್ನೂ ಸಹ ಸಚಿವ ಸಂಪುಟ ವಿಸ್ತರಣೆ ಮಾಡಿಲ್ಲ.  ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರಿಲ್ಲದೇ, ರಾಜ್ಯದಲ್ಲಿ ಮಂತ್ರಿಮಂಡಲವಿಲ್ಲದೇ, ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ.

ಸಚಿವರಿಲ್ಲದ ಕಾರಣ  ಆಗಸ್ಟ್ 15 ರಂದು ಜಿಲ್ಲಾ ಕೇಂದ್ರಗಳಲ್ಲಿ ಈ ಬಾರಿ ಜಿಲ್ಲಾಧಿಕಾರಿಗಳೇ ರಾಷ್ಟ್ರ ಧ್ವಜಾರೋಹಣ ಮಾಡಲಿದ್ದಾರೆ. ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದ್ದಾಗ ಮತ್ತು ಸಚಿವರ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡುವುದು ಸಹಜ. ಆದರೆ ರಾಜ್ಯದಲ್ಲಿ ಬಹುಮತದ ಚುನಾಯಿತ ಸರ್ಕಾರ ಆಡಳಿತದಲ್ಲಿದ್ದರೂ, ಮುಖ್ಯಮಂತ್ರಿಗಳಿದ್ದರೂ ಸಚಿವ ಸಂಪುಟ ವಿಸ್ತರಣೆ ವಿಳಂಬವಾದ ಕಾರಣ ಜಿಲ್ಲಾ ಉಸ್ತುವಾರಿ ಸಚಿವರಿಲ್ಲದೇ ಜಿಲ್ಲಾಧಿಕಾರಿಗಳೇ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರ ಧ್ವಜ ಹಾರಿಸುತ್ತಿರುವುದು ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲು.

 

LEAVE A REPLY

Please enter your comment!
Please enter your name here