ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರು ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ರು. ಅವರಿಗೆ 66 ವರ್ಷ ವಯಸ್ಸಾಗಿತ್ತು.
ಈ ಹಿಂದೆ ವಾಜಪೇಯಿ ಸರ್ಕಾರದಲ್ಲಿ ಮಾಹಿತಿ ಮತ್ತು ಪ್ರಸಾರ ಇಲಾಖೆಯ ರಾಜ್ಯ ಸಚಿವರಾಗಿ, ಕಾನೂನು ಮತ್ತು ನ್ಯಾಯ ಹಾಗೂ ಕಂಪನಿ ವ್ಯವಹಾರಗಳ ಸಚಿವರಾಗಿ ಮತ್ತು ನರೇಂದ್ರ ಮೋದಿ ಸರ್ಕಾರದಲ್ಲಿ ವಿತ್ತ ಸಚಿವರಾಗಿ ಅರುಣ್ ಜೇಟ್ಲಿಯವರು ಕಾರ್ಯನಿರ್ವಹಿಸಿದ್ರು. ಕಳೆದ ಲೋಕಸಭಾ ಎಲೆಕ್ಷನ್ನಲ್ಲಿ ಅನಾರೋಗ್ಯದ ಕಾರಣದಿಂದ ಅವರು ಸ್ಪರ್ಧಿಸಿರಲಿಲ್ಲ. ಇದೇ ಆಗಸ್ಟ್ 9ರಂದು ಉಸಿರಾಟದ ತೊಂದರೆ, ಕಿಡ್ನಿ ಸಂಬಂಧಿತ ಸಮಸ್ಯೆಗಳಿಂದಾಗಿ ಬಳಲುತ್ತಿದ್ದ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 12.07 ಕ್ಕೆ ಅವರು ಕೊನೆಯುಸಿರೆಳೆದ್ರು.