ನವದೆಹಲಿ : 8.59 ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಇಂದೂ ಕೂಡ ಜಾಮೀನು ಸಿಕ್ಕಿಲ್ಲ. ಜಾಮೀನು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿ ಇಡಿ ವಿಶೇಷ ನ್ಯಾಯಾಲಯದ ನ್ಯಾ. ಅಜಯ್ ಕುಮಾರ್ ಕುಹರ್ ಆದೇಶ ಹೊರಡಿಸಿದ್ದಾರೆ.
ಜಾಮೀನು ಸಿಗದ ಕಾರಣ ನ್ಯಾಯಾಂಗ ಬಂಧನದಲ್ಲಿರುವ ಡಿಕೆಶಿ ಅಕ್ಟೋಬರ್ 1ರವರೆಗೂ ತಿಹಾರ್ ಜೈಲಿನಲ್ಲೇ ಇರಬೇಕಾಗಿದೆ. ಇನ್ನು ಜಾಮೀನಿಗಾಗಿ ಡಿಕೆಶಿ ದೆಹಲಿ ಹೈಕೋರ್ಟ್ ಮೊರೆ ಹೋಗಲು ಅವಕಾಶವಿದ್ದು, ಇಂದು ಕೋರ್ಟ್ ಅವಧಿ ಮುಗಿದಿರುವುದರಿಂದ ನಾಳೆ ದೆಹಲಿ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.
ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಜಾ… ತಿಹಾರ್ ಜೈಲಲ್ಲೇ ‘ಬಂಡೆ’ ವಾಸ..!
TRENDING ARTICLES