Friday, December 27, 2024

ಉಪ ಚುನಾವಣೆಗೆ ‘ಸುಪ್ರೀಂ’ ತಡೆ – ಅನರ್ಹ ಶಾಸಕರಿಗೆ ರಿಲೀಫ್..!

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸುಪ್ರೀಂಕೋರ್ಟ್​ ಗುರುವಾರ ತಡೆಯಾಜ್ಞೆ ನೀಡಿದ್ದು, ಇದರಿಂದ 15 ಅನರ್ಹ ಶಾಸಕರಿಗೆ ರಿಲೀಫ್ ಸಿಕ್ಕಂತಾಗಿದೆ.
ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ತ್ರಿಸದಸ್ಯ ನ್ಯಾಯಪೀಠ ಬೈ ಎಲೆಕ್ಷನ್​ಗೆ ತಾತ್ಕಾಲಿಕ ತಡೆ ನೀಡಿ, ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಿದೆ.
ತಮ್ಮನ್ನು ಅನರ್ಹಗೊಳಿಸಿರುವ ಸ್ಪೀಕರ್ ಆದೇಶಕ್ಕೆ ತಡೆ ನೀಡಿ, ಇಲ್ಲವೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿ ಅಥವಾ ಉಪ ಚುನಾವಣೆಗೆ ತಡೆ ನೀಡುವಂತೆ ಕೋರಿ ಅನರ್ಹ ಶಾಸಕರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

RELATED ARTICLES

Related Articles

TRENDING ARTICLES