ಮುಂಬೈ : ಮಹಾರಾಷ್ಟ್ರದ ರಾಜಕೀಯ ಹೈಡ್ರಾಮಕ್ಕೆ ಮತ್ತೊಂದು ಮೆಗಾ ಟ್ವಿಸ್ಟ್ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆಗೆ ಅಸ್ತು ಎಂದಿದೆ.
ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನೆ, ಎನ್ಸಿಪಿ ವಿಫಲವಾದ ಬೆನ್ನಲ್ಲೇ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲ ಭಾಗತ್ ಸಿಂಗ್ ಕೊಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಪ್ರಧಾನಿ ನೇತೃತ್ವದ ಸಂಪುಟ ಸಭೆಯಲ್ಲಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಒಪ್ಪಿಗೆ ಸಿಕ್ಕಿದೆ.
ಸರ್ಕಾರ ರಚಿಸಲು ಎನ್ಸಿಪಿಗೆ ಇಂದು ರಾತ್ರಿ 8.30ರವರೆಗೆ ಕಾಲಾವಕಾಶ ನೀಡಲಾಗಿತ್ತು. ಅಗತ್ಯ ಸಂಖ್ಯಾಬಲ ಒಗ್ಗೂಡಿಸಲು ಎನ್ಸಿಪಿ ಶತಾಯಗತಾಯ ಪ್ರಯತ್ನ ಮಾಡುತ್ತಿದ್ದರೂ..ಇದೂವರೆಗೂ ಸರ್ಕಾರ ರಚನೆ ಸಂಬಂಧ ಹಕ್ಕು ಮಂಡನೆ ಮಾಡಿಲ್ಲ. ಹೀಗಾಗಿ ರಾಜ್ಯಪಾಲರು ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿದ್ದರು.
ಶಿವಸೇನೆ ಜೊತೆ ಸರ್ಕಾರ ರಚಿಸುವ ಸಂಬಂಧ ಕಾಂಗ್ರೆಸ್ ಮತ್ತು ಎನ್ಸಿಪಿ ನಿರ್ಧಾರ ಅಂತಿಮಗೊಂಡಿಲ್ಲ. ರಾತ್ರಿ 8ಗಂಟೆಯವರೆಗೆ ಅವಕಾಶವಿದ್ದರೂ ರಾಷ್ಟ್ರಪತಿ ಆಳ್ವಿಕೆ ಹೇರಿರುವುದು ಸರಿಯಲ್ಲ ಎಂದು ರಾಷ್ಟ್ರಪತಿ ಆಡಳಿತದ ನಿರ್ಧಾರ ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ತರ್ತು ವಿಚಾರಣೆಗೆ ಮನವಿ ಮಾಡಿದೆ.
ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಗ್ರೀನ್ ಸಿಗ್ನಲ್!
TRENDING ARTICLES