Thursday, May 9, 2024

ಚಾರ್ ದಿನ್​​ ಕಾ ‘ಮಹಾ’ ಸುಲ್ತಾನ್ ದೇವೇಂದ್ರ ಫಡ್ನವಿಸ್ ರಾಜೀನಾಮೆ!

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನಾಲ್ಕು ದಿನಗಳ ‘ಮಹಾ’ ಸರ್ಕಾರ ಪತನವಾಗಿದೆ.
ನಾಳೆ ಸಂಜೆ 5 ಗಂಟೆಯೊಳಗೆ ಬಹುಮತ ಸಾಬೀತು ಪಡಿಸಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದ ಬೆನ್ನಲ್ಲೇ ‘ಮಹಾ’ಸಿಎಂ ಫಡ್ನವಿಸ್ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ಘೋಷಿಸಿದ್ದಾರೆ. 2ನೇ ಬಾರಿ ಸಿಎಂ ಆಗಿದ್ದ ಫಡ್ನವಿಸ್ ಚಾರ್ ದಿನ್​​ ಕಾ ಸುಲ್ತಾನ್ ಅನ್ನೋ ಹಣೆಪಟ್ಟಿಯೊಂದಿಗೆ ಅಧಿಕಾರದಿಂದ ಇಳಿದಿದ್ದಾರೆ.
ನಾಳೆ ಸದನದಲ್ಲಿ ವಿಶ್ವಾಸಮತ ಸಾಬೀತು ಪಡಿಸುವುದು ಕಷ್ಟಸಾಧ್ಯ ಎಂದು ಅರಿತ ಅವರು, ನಾಳೆ ಆಗುವ ಮುಜುಗರ ತಪ್ಪಿಸಿಕೊಳ್ಳಲು ಇಂದೇ ಸ್ಥಾನ ತ್ಯಾಗ ಮಾಡಿದ್ದಾರೆ.
ಕಳೆದ 23ರಂದು ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಎನ್​ಸಿಪಿಯ ಅಜಿತ್ ಪವಾರ್ ಕ್ರಮವಾಗಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ರು. ಈ ಮಿಂಚಿನ ಮೈತ್ರಿಗೆ ಅವಕಾಶ ಮಾಡಿಕೊಟ್ಟ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಕ್ರಮ ಪ್ರಶ್ನಿಸಿ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದವು.
24 ಮತ್ತು 25ರಂದು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ನ್ಯಾ. ಎನ್ ವಿ ರಮಣ, ನ್ಯಾ. ಅಶೋಕ್ ಭೂಷಣ್ ಮತ್ತು ನ್ಯಾ. ಸಂಜೀವ್ ಖನ್ನಾ ನೇತೃತ್ವದ ತ್ರಿಸದಸ್ಯ ಪೀಠ ನಾಳೆ ಫಡ್ನವಿಸ್ ಬಹುಮತ ಸಾಬೀತು ಪಡಿಸಬೇಕೆಂದು ಆದೇಶಿಸಿ ಇಂದು ಬೆಳಗ್ಗೆ ‘ಮಹಾ’ ಆದೇಶ ಹೊರಡಿಸಿತ್ತು.

RELATED ARTICLES

Related Articles

TRENDING ARTICLES