Thursday, April 25, 2024

ಕೆಪಿಸಿಸಿ ಸಾರಥಿಯಾಗಿ ಡಿ.ಕೆ ಶಿವಕುಮಾರ್ ?

ಬೆಂಗಳೂರು : ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿದ್ದು, ಹೈಕಮಾಂಡ್ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದರು ಕೂಡ, ಡಿಕೆಶಿ ಅವರ ಹೆಗಲಿಗೆ ಕೆಪಿಸಿಸಿ ಪಟ್ಟ ಕಟ್ಟಲು ಒಲವು ತೋರಿದೆ ಎಂದು ತಿಳಿದು ಬಂದಿದೆ.

ಹೊಸ ವರ್ಷಕ್ಕೆ ಹೈಕಮಾಂಡ್ ಗುಡ್ ನ್ಯೂಸ್ ಕೊಡಲು ಸಜ್ಜಾಗಿದ್ದು, ಡಿ.ಕೆ ಶಿವಕುಮಾರ್ ರಾಜ್ಯ ಕಾಂಗ್ರೆಸ್ ನ ನೂತನ ಅಧ್ಯಕ್ಷರನ್ನಾಗಿ ಮಾಡಲಿದೆ ಎಂದು ಹೇಳಲಾಗುತ್ತಿದೆ. ವಿಪಕ್ಷ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮನವೊಲಿಸಿ, ರಾಜೀನಾಮೆ ವಾಪಸ್ ಪಡೆಯುವಂತೆ ಹೈಕಮಾಂಡ್ ಸೂಚಿಸಿದೆ ಎನ್ನುವ ಮಾಹಿತಿ ದೊರೆತಿದೆ.

RELATED ARTICLES

Related Articles

TRENDING ARTICLES