Tuesday, December 5, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeಜಿಲ್ಲಾ ಸುದ್ದಿಭಾರತ್ ಬಂದ್​ : ಬೆಂಗಳೂರಿನಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್​

ಭಾರತ್ ಬಂದ್​ : ಬೆಂಗಳೂರಿನಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್​

ಬೆಂಗಳೂರು: ವಿವಿಧ ಕಾರ್ಮಿಕ ಸಂಘಟನೆಗಳು ತಮ್ಮ ಬೇಡಿಕೆ ಈಡೇರಿಸುವಂತೆ ಭಾರತ್​ ಬಂದ್​ಗೆ ಕರೆ ಕೊಟ್ಟಿದೆ. ಈ ಹಿನ್ನಲೆ ಬೆಂಗಳೂರಲ್ಲಿ ಬಿಗಿ ಪೊಲೀಸ್​ ಬಂದೋಬಸ್ತ್​ ಕೈಗೊಳ್ಳಲಾಗಿದೆ.

ಪ್ರತಿಭಟನೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ, 11 ಡಿಸಿಪಿ, 23 ಎಸಿಪಿ, 111 ಇನ್ಸ್​ಪೆಕ್ಟರ್​ಗಳು, 316 ಪಿಎಸ್​​ಐ, 476 ಎಎಸ್​ಐಗಳು, 4,547 ಕಾನ್ಸ್​ಟೇಬಲ್​ಗಳು, 82 ಕೆಎಸ್​ಆರ್​ಪಿ ಹಾಗೂ ಸಿಎಆರ್​ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

ಪ್ರತಿಭಟನೆಕಾರರಿಂದ ಸಾರ್ವಜನಿಕರಿಗೆ ತೊಂದರೆ ಆದಲ್ಲಿ ಅಥವಾ ಬಲವಂತವಾಗಿ ಪ್ರತಿಭಟನೆಗೆ ಕರೆತರುವುದಾಗಲಿ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್​ ಕಮೀಷನರ್​ ಭಾಸ್ಕರ್​ರಾವ್​ ಎಚ್ಚರಿಕೆ ನೀಡಿದ್ದಾರೆ.

4 COMMENTS

LEAVE A REPLY

Please enter your comment!
Please enter your name here

Most Popular

Recent Comments