Monday, December 23, 2024

ಕೆಲವೇ ತಿಂಗಳಲ್ಲಿ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ ಅಮಿತ್ ಶಾ : ಬಿಎಸ್​​ ವೈ

ಬೆಂಗಳೂರು : ಕೆಲವೇ ತಿಂಗಳುಗಳಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ದೇಶದ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ ಅಂತ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಡಿ ಹೊಗಳಿದ್ದಾರೆ. 
ವೇದಾಂತ ಭಾರತಿ ಸಂಸ್ಥೆ ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ವಿವೇಕ ದೀಪಿನಿ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಮಿತ್ ಶಾ ದಕ್ಷ ಮಂತ್ರಿಯಾಗಿದ್ದು, ಕಾಶ್ಮೀರದಂತಹ ಜಟಿಲ ಸಮಸ್ಯೆಗಳನ್ನು ಕೆಲವೇ ಕೆಲವು ತಿಂಗಳುಗಳಲ್ಲಿ ಪರಿಹರಿಸಿದ್ದಾರೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಬಳಿಕ ಒಬ್ಬ ದಕ್ಷ ಮಂತ್ರಿಗಳು ಸಿಕ್ಕಿದ್ದಾರೆ ಎಂದರು.

RELATED ARTICLES

Related Articles

TRENDING ARTICLES