ಬೆಂಗಳೂರು: ರಾತ್ರೋರಾತ್ರಿ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದ ಶಾಸಕರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಶ್ರೀಗಳು ಸಭೆ ನಡೆಸಿದರು. ಸುಮಾರು 30 ನಿಮಿಷಗಳ ಕಾಲ ಸಭೆ ನಡೆದಿದ್ದು, ಸಭೆಯಲ್ಲಿ ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ನೀಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಅದರಂತೆ ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ ಹಾಗೂ ಶಂಕರ್ ಪಾಟೀಲ್ ಮುನೇನಕೊಪ್ಪ ಈ ಮೂವರಲ್ಲಿ ಇಬ್ಬರಿಗೆ ಸಚಿವ ಸ್ಥಾನ ಕೊಡಬೇಕು. ಈ ಸಭೆಯಲ್ಲಿ ಸಚಿವ ಸ್ಥಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಬೇಕು. ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರ್ಪಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ.
ರಾತ್ರಿ ನಡೆದ ಸಭೆಯಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ಸಂಗಣ್ಣ ಕರಡಿ, ಸಿಎಂ ಕಾನೂನು ಸಲಹೆಗಾರ ಮೋಹನ್ ಲಿಂಬಿಕಾಯಿ, ಹನುಮಂತ ನಿರಾಣಿ, ಶಂಕರ್ ಪಾಟೀಲ್ ಮುನೇನಕೊಪ್ಪ, ಸಿದ್ದು ಸವದಿ ಹಾಗೂ ಮಹೇಶ್ ಕುಮಟಹಳ್ಳಿ ಭಾಗಿಯಾಗಿದ್ದರು.