ನವದೆಹಲಿ: ಜಗತ್ತಿನಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೋವಿಡ್-19 ಗೆ ಕೇವಲ 24 ಗಂಟೆಯಲ್ಲಿ 5,200 ಕ್ಕೂ ಹೆಚ್ಚು ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು ಜಗತ್ತಿನಲ್ಲಿ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 3,39,425 ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ ಒಟ್ಟು 52,98,207 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಕೇವಲ 24 ಗಂಟೆಯಲ್ಲಿ ಸೋಂಕು 1,07,716 ಜನರಿಗೆ ಸೋಂಕು ಹರಡಿದೆ. ಇವೆಲ್ಲದರ ನಡುವೆ ಸೋಂಕಿನಿಂದ 21,55,788 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಗತ್ತಿನ ದೊಡ್ಡಣ್ಣ ಅಮೆರಿಕಾವನ್ನು ಮಹಾಮಾರಿ ಬಿಡದೇ ಕಾಡುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸೋಂಕಿತರ ಸಂಖ್ಯೆ ಕೇವಲ 24 ಗಂಟೆಯಲ್ಲಿ 24,197 ರಷ್ಟು ಏರಿಕೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 16,45, 094 ಏರಿಕೆಯಾಗಿದೆ. ಇನ್ನು ಅಮೆರಿಕಾದಲ್ಲಿ ಈವರೆಗೆ 4,03,201 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಸಾವನ್ನಪ್ಪಿದವರ ಸಂಖ್ಯೆಯೂ 97,647 ಕ್ಕೆ ಏರಿಕೆಯಾಗಿದೆ.
ಜಗತ್ತಿನ ಸೋಂಕಿತರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದ ಸ್ಪೇನ್ ದೇಶವನ್ನು ಹಿಂದಿಕ್ಕಿ ಬ್ರೆಜಿಲ್ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಬ್ರೆಜಿಲ್ನಲ್ಲಿ 19,969 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,30,890 ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ 21,048 ಜನರಲ್ಲಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಒಟ್ಟು 1,35,430 ಜನರಿಗೆ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಮೂರನೇ ಸ್ಥಾನದಲ್ಲಿ ಇಟಲಿ ಇತ್ತು. ಆದರೆ ಈಗ ರಷ್ಯಾ ಮೂರನೇ ಸ್ಥಾನಕ್ಕೆ ಬಂದು ನಿಂತಿದೆ. ರಷ್ಯಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದ್ದು, 3,26,448 ಕ್ಕೆ ಏರಿಕೆಯಾಗಿದೆ. ಇನ್ನು ಈವರೆಗೆ ಒಟ್ಟು 3,249 ಜನ ಸೋಂಕಿತರು ಮೃತಪಟ್ಟಿದ್ದಾರೆ.
ಇನ್ನು ಎರಡನೇ ಸ್ಥಾನದಲ್ಲಿದ್ದ ಸ್ಪೇನ್ ನಾಲ್ಕನೇ ಸ್ಥಾನಕ್ಕೆ ಇಳಿದಿದೆ. ಇಲ್ಲಿ ಒಟ್ಟು 2,81,904 ಜನ ಸೋಂಕಿತರು ಪತ್ತೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1,787 ಜನರಲ್ಲಿ ಸೋಂಕು ಪಾಸಿಟಿವ್ ಬಂದಿದೆ. ಸಾವನ್ನಪ್ಪಿದವರ ಸಂಖ್ಯೆಯೂ 28,628 ಕ್ಕೆ ಏರಿಕೆಯಾಗಿದೆ.
ಜಗತ್ತಿನ ಸೋಂಕಿತರ ಪಟ್ಟಿಯಲ್ಲಿ ಸ್ಪೇನ್ ನಂತರದ ಸ್ಥಾನವನ್ನು ಯುಕೆ ಪಡೆದುಕೊಂಡಿದ್ದು, ಒಂದೇ ದಿನದಲ್ಲಿ 3,287 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,54,195 ಕ್ಕೆ ಏರಿದೆ. ಇನ್ನು ಅಲ್ಲಿ ಸಾವನ್ನಪ್ಪಿದವರ ಸಂಖ್ಯೆಯೂ ಹೆಚ್ಚಾಗಿದ್ದು, 36,393 ಕ್ಕೇರಿಕೆಯಾಗಿದೆ.
ಮೂರನೇ ಸ್ಥಾನದಲ್ಲಿದ್ದ ಇಟಲಿಯು 6 ನೇ ಸ್ಥಾನಕ್ಕೆ ಇಳಿದಿದ್ದು, ಅಲ್ಲಿ ಕಳೆದ 24 ಗಂಟೆಯಲ್ಲಿ 652 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2,28,658 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆಯು ಏರಿಕೆಯಾಗಿದ್ದು, ಮೃತಪಟ್ಟವರ ಸಂಖ್ಯೆಯೂ 32 ಸಾವಿರದ ಗಡಿ ದಾಟಿದೆ. ಇಲ್ಲಿ ಚೇತರಿಸಿಕೊಂಡವರ ಸಂಖ್ಯೆಯೂ ಏರಿಕೆಯಾಗಿದ್ದು, 1,36,720 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.