ಹುಬ್ಬಳ್ಳಿ : ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದಾರೆ. ನಗರದ ಲ್ಯಾಮಿಂಗ್ಟನ್ ಶಾಲೆಯಲ್ಲಿ ಪೊಲೀಸರಿಂದ ಸ್ಥಳ ಪರಿಶೀಲನೆ ನಡೆಸಲಾಯಿತು. ಪರೀಕ್ಷೆಗೆ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಮುಂಜಾಗೃತಾ ಕ್ರಮವಾಗಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಸಲಾಯಿತು.
ಈ ಪರೀಕ್ಷಾ ಕೇಂದ್ರದಲ್ಲಿ 346 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ 90 ಹಾಗೂ ಹೆಚ್ಚುವರಿಯಾಗಿ 17 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಜಿಲ್ಲೆಯಾದ್ಯಂತ ಒಟ್ಟು 27,841ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಹಾಕಲಾಗಿದೆ. ಪರೀಕ್ಷಾ ಕೇಂದ್ರದ ಒಳ ಪ್ರವೇಶ ಮಾಡುವ ಮುನ್ನ ಹ್ಯಾಂಡ ಸೈನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರ ಸುತ್ತ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.