ಬೆಂಗಳೂರು : ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಹಾಕುತ್ತಿದೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೆ ಇದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಕೊರೋನಾಗೆ 4 ಜನ ಸಾವನ್ನಪ್ಪಿದ್ದಾರೆ. ಒಂದು ಕಡೆ ಸರಿಯಾದ ಚಿಕಿತ್ಸೆ ಇಲ್ಲದೆ ಜನರು ನರಳಾಡುತ್ತಿದ್ದಾರೆ. ಸದ್ಯ ಆಸ್ಪತ್ರೆಗಳಲ್ಲಿಯೂ ಸರಿಯಾದ ವ್ಯವಸ್ಥೆ ಇಲ್ಲವೆಂಬ ಆರೋಪಗಳು ಕೇಳಿ ಬರುತ್ತಿದೆ. ಇನ್ನು ಕೊರೋನಾ ಅಟ್ಟಹಾಸ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಪರಿಸಿಸ್ಥಿತಿ ಕೈ ಮೀರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವೈದ್ಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.