ಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಘಟನೆ ಹುಬ್ಬಳ್ಳಿಯ ಕೃಷ್ಣ ಭವನ ಹೊಟೇಲ್ ಎದುರು ನಡೆದಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಎರಡು ವಿದ್ಯಾರ್ಥಿಗಳ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಹೊಡೆದಾಡಿಕೊಂಡವರಲ್ಲಿ ಓರ್ವ ವಿದ್ಯಾರ್ಥಿ ಪ್ರಜ್ಞೆ ತಪ್ಪಿದ್ದು, ಗಾಯಾಳುವನ್ನು ಚಿಟಗುಪ್ಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿ ನಗರದ ದುರ್ಗಾದೇವಿ ಶಾಲೆಯ ವಿದ್ಯಾರ್ಥಿ ಎನ್ನಲಾಗಿದೆ.
ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.