ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಕೊನೆಯ ದಿನವಾದ ಇಂದು ಒಟ್ಟು 515 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಜಿಲ್ಲೆಯಲ್ಲಿ 13061 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿತರಾಗಿದ್ದು ಅದರಲ್ಲಿ 12546 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು, 515 ವಿದ್ಯಾರ್ಥಿಗಳು ಕಾರಣಾಂತರಗಳಿಂದ ಗೈರಾಗಿದ್ದರು. ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಕೊನೆಯ ಪರೀಕ್ಷೆಯಲ್ಲಿ ಇಷ್ಟು ವಿದ್ಯಾರ್ಥಿಗಳು ಗೈರು ಹಾಜರಿ ಆಗಲು ಕಾರಣ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ ಒಟ್ಟು ವಿದ್ಯಾರ್ಥಿಗಳಲ್ಲಿ ಕಂಟೈನ್ಮೆಂಟ್ ಪ್ರದೇಶಗಳಿಂದ ಸಹ 125 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. 8 ವಿದ್ಯಾರ್ಥಿಗಳು ಅನಾರೋಗ್ಯದಿಂದ ವಿಶೇಷ ಕೊಠಿಡಿಯಲ್ಲಿ ಪರೀಕ್ಷೆ ಬರೆದಿದ್ದಾರೆ. ಒಟ್ಟಿನಲ್ಲಿ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ಕೊರೊನಾ ಆತಂಕದಲ್ಲಿ ಮುಕ್ತಾಯವಾಗಿದೆ. ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಳೆದ ಬಾರಿ ಮೂರನೇ ಸ್ಥಾನವನ್ನ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಪಡೆದಿತ್ತು. ಈ ಬಾರಿ ಯಾವ ಸ್ಥಾನ ಗಳಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.