ಮಂಡ್ಯ : ನಮ್ಮ ಗ್ರಾಮಕ್ಕೆ ಬೆಂಗಳೂರು, ಮೈಸೂರಿನಿಂದ ಯಾರೂ ಬರೋ ಹಾಗಿಲ್ಲ. ಒಂದೊಮ್ಮೆ ಬಂದರೆ 5 ಸಾವಿರ ರೂ. ದಂಡ ವಿಧಿಸಲು ಗ್ರಾಮಸ್ಥರು ನಿರ್ಧಾರ ಮಾಡಿ ಟಾಂಟಾಂ ಹೊಡೆಸಿರುವ ಘಟನೆ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.
ಕೊರೋನಾ ನಿಯಂತ್ರಣಕ್ಕಾಗಿ ಈ ನಿರ್ಧಾರ ಮಾಡಲಾಗಿದ್ದು, ಟಾಂಟಾಂ ಹೊಡೆದು ವ್ಯಕ್ತಿಯೊಬ್ಬ ಗ್ರಾಮದಲ್ಲಿ ಹೇಳಿಕೊಂಡು ಹೋಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗ್ರಾಮದ ಮುಖಂಡರು ಒಂದೆಡೆ ಕುಳಿತು ಮಾತುಕತೆ ನಡೆಸಿ ಈ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.
ಆದರೆ ಆ ಗ್ರಾಮ ಯಾವುದು ಎಂಬುದು ಇನ್ನೂ ನಿಗೂಢವಾಗಿಯೇ ಇದೆ. ಜಿಲ್ಲೆಯ ಹಲವು ಗ್ರಾಮಗಳಲ್ಲಿ ಈ ರೀತಿಯ ಫರ್ಮಾನು ಹೊರಡಿಸಲಾಗಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರಾಮಸ್ಥರು ಸೈ ಎಂದಿದ್ದಾರೆ.
ಗ್ರಾಮಾಂತರ ಪ್ರದೇಶಗಳಲ್ಲಿ ಕೊರೋನಾ ನಿಯಂತ್ರಣ ಮಾಡಲು ಹೊರಗಿನವರ ಪ್ರವೇಶಕ್ಕೆ ನಿಷೇಧ ಮಾಡಲಾಗುತ್ತಿದೆ. ಇದು ಕೇವಲ ಒಂದು ತುಣುಕಾಗಿದ್ದು, ಮತ್ತಷ್ಟು ಗ್ರಾಮಗಳಲ್ಲಿ ಈ ರೀತಿಯ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ಬೆಂಗಳೂರು, ಮೈಸೂರಿಂದ ನಮ್ಮೂರಿಗೆ ಯಾರೂ ಬರಂಗಿಲ್ಲ | ಬಂದ್ರೆ 5 ಸಾವಿರ ರೂ. ದಂಡ..!
TRENDING ARTICLES