ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕೊರೊನಾ ಅಟ್ಟಹಾಸ ದಿನೇದಿನೇ ಹಾಕುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಡಳಿತ ಜಿಲ್ಲೆಯ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಿದೆ. ಇದೆ ಮಹಾ ಮಾರಿ ಕೊರೊನ ವೈರಸ್ ದ್ವಿಗುಣವಾಗುತ್ತಿರುವ ಹಿನ್ನೆಲೆ ಪ್ರವಾಸಿ ತಾಣಗಳಿಗೆ ಸಂಪೂರ್ಣವಾಗಿ ನಿಷೇಧ ಹೇರಿದೆ. ಇಂದಿನಿಂದ ಮುಂದಿನ ಆದೇಶ ಬರುವವರೆಗೂ ಜಿಲ್ಲೆಯ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ ದೇವರಮನೆ ಹೀಗೆ ಎಲ್ಲಾ ಪ್ರದೇಶಗಳಿಗೂ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಹೊರ ರಾಜ್ಯ ಹೊರ ಜಿಲ್ಲೆಗಳಿಂದ ಬರುವ ಪ್ರವಾಸಿಗರಿಗೆ ಹೋಂಸ್ಟೇ ರೆಸಾರ್ಟ್ ಗಳಲ್ಲಿ ಯಾವುದೇ ಬುಕ್ಕಿಂಗ್ ಮಾಡಿಕೊಳ್ಳದಂತೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಅಂತಹ ಪ್ರಕರಣಗಳು ಕಂಡುಬಂದರೆ ಪ್ರಭಾವಿ ವ್ಯಕ್ತಿಗಳಾದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 94 ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳು ಬೆಂಗಳೂರು ಸಂಪರ್ಕ ಹೊಂದಿರುವ ಕಾರಣ ಈ ಆದೇಶವನ್ನು ಹೊರಡಿಸಿದ್ದಾರೆ. ಇನ್ನು ಮುಂದೆ ಪ್ರವಾಸಿಗರು ಜಿಲ್ಲೆಗೆ ಎರಡು ಮಾಡುವ ಮುನ್ನ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿದೆ