Wednesday, January 15, 2025

ಅನುಮತಿಯಿಲ್ಲದೇ ಸಭೆ ಸಮಾರಂಭ ನಡೆಸಿದ್ದಲ್ಲಿ ಪ್ರಕರಣ ದಾಖಲು..!

ಉಡುಪಿ : ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಆದರೂ ಕೂಡ ಯಾವುದೇ ಪೂರ್ವಾನುಮತಿ ಇಲ್ಲದೆ, ನಿಯಮ ಬಾಹಿರವಾಗಿ ಹುಟ್ಟುಹಬ್ಬದ ಆಚರಣೆ, ಮೆಹಂದಿ ಕಾರ್ಯಕ್ರಮಗಳು, ಸನ್ಮಾನ ಕಾರ್ಯಕ್ರಮ ಮುಂತಾದವುಗಳು ನಡೆಯುತ್ತಿದೆ. ಇಂತಹ ಕಾರ್ಯಕ್ರಮಗಳು ಕೋವಿಡ್ -19ನ್ನು ಹರಡುವಂತಹದಾಗಿರುವ ಕಾರಣಕ್ಕೆ ಕಾರ್ಯಕ್ರಮ ಆಯೋಜಿಸುವ ಸಂಘಟಕರ ಮೇಲೆ ಕಡ್ಡಾಯವಾಗಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಪೂರ್ವಾನುಮತಿಯ ಮೇರೆಗೆ ಜರುಗುವ ಮದುವೆ, ಇತರೆ ಸಭೆ ಸಮಾರಂಭ, ಸನ್ಮಾನ ಇತ್ಯಾದಿ ಕಾರ್ಯಕ್ರಮಗಳಲ್ಲಿ ಸರ್ಕಾರದ ಆದೇಶದನ್ವಯ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಗ್ಲೌಸ್, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಶುಚಿತ್ವ ಕಾಪಾಡಿಕೊಳ್ಳುವಿಕೆಗೆ ಹಾಗೂ ಇತರ ಎಸ್.ಓ.ಪಿ. ಕ್ರಮಗಳು ಯಥಾ ರೀತಿಯಲ್ಲಿ ಪಾಲನೆಯಾಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಲು ಸಂಬಂಧಿಸಿ ಅಧಿಕಾರಿಗಳಿಗೆ ಖುದ್ದಾಗಿ ಭೇಟಿ ನೀಡಿ ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

RELATED ARTICLES

Related Articles

TRENDING ARTICLES