ಹಾಸನ : ಹಾಸನದಲ್ಲಿಂದು ಡೆಡ್ಲಿ ವೈರಸ್ ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19 ಕ್ಕೆ ಏರಿಯಾಕೆಯಾಗಿದೆ. ಹಾಸನ ನಗರದ 57 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಉಸಿರಾಟದ ಸಮಸ್ಯೆಯಿಂದ ಜುಲೈ 5 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟವಿದ್ದರಿಂದ ಇವರನ್ನು ಐಸಿಯುನಲ್ಲಿಡಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಆಲೂರು ತಾಲೂಕಿನ 45 ವರ್ಷದ ಮಹಿಳೆ ಕೂಡಾ ಕೊರೊನಾಗೆ ಬಲಿಯಾಗಿದ್ದು, ಕೊರೊನಾ ಪಾಸಿಟಿವ್ ನಿಂದ ಜುಲೈ 11 ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಕೂಡಾ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮತ್ತೊಂದು ಕಡೆ ಕೊರೊನಾ ಸಾವಿನ ಸಂಖ್ಯೆಯೂ ಹೆಚ್ವಾಗುತ್ತಿದೆ. ಹೀಗಾಗಿ ಜಿಲ್ಲೆಯ ಜನರು ಆತಂಕಕ್ಕೊಳಗಾಗಿದ್ದು, ಹಾಸನ ಜಿಲ್ಲೆಯನ್ನೂ ಸಂಪೂರ್ಣ ಲಾಕ್ ಡೌನ್ ಮಾಡಬೇಕೆಂಬ ಕೂಗು ಕೇಳಿ ಬರುತ್ತಿದೆ.