ಶಿವಮೊಗ್ಗ : ಇಲ್ಲಿನ ತಾಲೂಕು ಕಚೇರಿಗೆ ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ, ಆದೇಶ ಹೊರಡಿಸಲಾಗಿದೆ. ತಾಲೂಕು ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುವ, ಗ್ರಾಮ ಲೆಕ್ಕಿಗನಿಗೆ, ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ, ಇಡೀ ತಾಲೂಕು ಕಚೇರಿಗೆ ಬೀಗ ಜಡಿಯಲಾಗಿದೆ. ತಹಶೀಲ್ದಾರ್ ಕಚೇರಿಗೆ ಇಂದಿನಿಂದ ಜು. 15 ರವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಇಡೀ ಕಚೇರಿಯ ಕಟ್ಟಡವೇ ಸ್ಯಾನಿಟೈಸ್ ಮಾಡಲಾಗುತ್ತಿದೆ. ನಗರದ ಕೋಟೆ ರಸ್ತೆಯ ನಿದಿಗೆ ನಾಡ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ, ಇಂದು ಇಡೀ ಕಚೇರಿ ಅಲೆದಾಡಿದ್ದು, ಈ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದ್ದು, ಸೀಲ್ ಡೌನ್ ಮಾಡಲಾಗಿದೆ.