ಚಿತ್ರದುರ್ಗ : ಗ್ರೀನ್ ಝೋನ್ ನಲ್ಲಿದ್ದ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರತೀ ದಿನ ಕೊರೊನಾ ಮಹಾಮಾರಿ ಸ್ಪೋಟಗೊಳ್ಳುತ್ತಲೇ ಇದೆ, ಜಿಲ್ಲೆಯಲ್ಲಿ ಇಂದು ಒಂದೇ ದಿನ 26 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಚಿತ್ರದುರ್ಗದಲ್ಲಿ 11, ಚಳ್ಳಕೆರೆ ತಾಲೂಕಿನಲ್ಲಿ 04, ಹೊಸದುರ್ಗ ತಾಲೂಕಿನಲ್ಲಿ 07, ಹೊಳಲ್ಕೆರೆ ತಾಲ್ಲೂಕಿನಲ್ಲಿ 02, ಹಾಗು ಹಿರಿಯೂರು ತಾಲ್ಲೂಕಿನಲ್ಲಿ 02 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ಸೋಂಕು ಜಿಲ್ಲಾಧಿಕಾರಿಗಳ ಕಚೇರಿಗೂ ಕಾಲಿಟ್ಟಿದೆ, ಚೇಳುಗುಡ್ಡ ನಿವಾಸಿ ಅಪರ ಜಿಲ್ಲಾಧಿಕಾರಿಗಳ ಕಾರು ಚಾಲಕ 58 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ಧೃಡಪಟ್ಟಿದೆ, ಹೀಗಾಗಿ ನಗರದ ಹೃದಯ ಭಾಗದಲ್ಲಿರುವ ಡಿಸಿ ಕಚೇರಿಯ ಎಲ್ಲಾ ಸಿಬ್ಬಂದಿಗಳಿಗೂ ಗಂಟಲು ದ್ರವ ಸಂಗ್ರಹಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಎಡಿಸಿ ಸೇರಿದಂತೆ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು 159ಕ್ಕೆ ಏರಿಕೆಯಾಗಿದ್ದು,
ಕೊರೊನಾ ಸೋಂಕಿನಿಂದ 95 ಮಂದಿ ಗುಣಮುಖರಾಗಿದ್ದಾರೆ. ಪಾಸಿಟಿವ್ ಬಂದ ಪ್ರಕರಣಗಳ ಪೈಕಿ 64 ಆಕ್ಟೀವ್ ಪ್ರಕರಣಗಳಿದ್ದು, ಇದುವರೆಗೆ ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೂ ಕೊರೊನಾ ವ್ಯಾಪಿಸುತ್ತಿದ್ದು, ಚಿತ್ರದುರ್ಗ ಹಿರಿಯೂರು ನಗರಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕ ಜಿಹೆಚ್ ತಿಪ್ಪಾರೆಡ್ಡಿ ಇಂದು ಎಪಿಎಂಸಿ, ಆರ್ ಎಂಸಿ ಸೇರಿದಂತೆ ಎಲ್ಲಾ ಮಾದರಿಯ ವರ್ತಕರ ಸಂಘಗಳ ಪದಾಧಿಕಾರಿಗಳ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಸಭೆಯಲ್ಲಿ ಬಹುತೇಕ 14 ದಿನಗಳು ಕಂಪ್ಲೀಟ್ ಲಾಕ್ ಡೌನ್ ಮಾಡುವಂತೆ ಅಭಿಪ್ರಾಯಗಳು ವ್ಯಕ್ತವಾಗಿದ್ದು, ಕೆಲವರು ಹಾಪ್ ಡೇ ಲಾಕ್ ಡೌನ್ ಮಾಡುವಂತೆ ಕೇಳಿದ್ದಾರೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿರುವ ತಹಶಿಲ್ದಾರ್, ಡಿವೈಎಸ್ಪಿ, ಶಾಸಕರ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಶಾಸಕ ಜಿಹೆಚ್ ತಿಪ್ಪಾರೆಡ್ಡಿ, ಟಾಸ್ಕ್ ಪೋರ್ಸ್ ಹಾಗು ಸರ್ಕಾರಕ್ಕೆ ಮಾಹಿತಿ ನೀಡಿ ಲಾಕ್ ಡೌನ್ ಬೇಕೇ ಬೇಡವೇ ಎಂಬುದನ್ನು ತೀರ್ಮಾನಿಸುವುದಾಗಿ ಹೇಳಿಕೆ ನೀಡಿದ್ದಾರೆ..
ಕೊರೋನಾ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಯನ್ನು ಲಾಕ್ಡೌನ್ ಮಾಡುವ ಕುರಿತು ಸಭೆ
TRENDING ARTICLES