ಕೋಲ್ಕತ್ತಾ : ಬಿಸಿಸಿಐ ಅಧ್ಯಕ್ಷ, ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ಹೋಂ ಕ್ವಾರೆಂಟೈನ್ಗೆ ಒಳಗಾಗಿದ್ದಾರೆ. ಸೌರವ್ ಗಂಗೂಲಿ ಅಣ್ಣ, ವೆಸ್ಟ್ ಬೆಂಗಾಲ್ ಕ್ರಿಕೆಟ್ ಅಸೋಸಿಯೇಶನ್ ಜಂಟಿ ಕಾರ್ಯದರ್ಶಿ ಸ್ನೇಹಸಿಶ್ ಗಂಗೂಲಿಗೆ ಕೊರೋನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಸೌರವ್ ಹೋಂ ಕ್ವಾರೆಂಟೈನ್ನಲ್ಲಿದ್ದಾರೆ.
ಸ್ನೇಹಸಿಶ್ ಗಂಗೂಲಿ ಪಶ್ಚಿಮ ಬಂಗಾಳದ ಮಾಜಿ ಪ್ರಥಮ ದರ್ಜೆ ಕ್ರಿಕೆಟರ್ ಕೂಡ ಹೌದು. ಕೆಲದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಕೋವಿಡ್ ಪರೀಕ್ಷೆ ಮಾಡಿಸಲಾಗಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಅವರನ್ನು ಬೆಲ್ಲೆ ವ್ಯೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಣ್ಣ ಸ್ನೇಹಸಿಶ್ಗೆ ಕೊರೋನಾ ಪಾಸಿಟಿವ್ ಬಂದಿರೋದ್ರಿಂದ ಸೌರವ್ ಗಂಗೂಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಗದಿತ ಅವದಿವರೆಗೆ ಹೋಮ್ ಕ್ವಾರೆಂಟೈನ್ನಲ್ಲಿರಲಿದ್ದಾರೆ.