ಚಿತ್ರದುರ್ಗ : ಮಹಾಮಾರಿ ಕೊವಿಡ್ ಸೋಂಕು ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದು ಸೋಂಕಿನ ಅಟ್ಟಹಾಸವನ್ನ ಮುಂದುವರೆಸಿದೆ. ಸಾಕಷ್ಟು ಜನರು ಉದ್ಯೋಗ ಕಳೆದುಕೊಂಡು ಸಂಕಷ್ಟದಲ್ಲಿ ಇದ್ದಾರೆ, ಮತ್ತೆ ಕೆಲವರು ತಮ್ಮ ತಮ್ಮ ಊರುಗಳಿಗೆ ಹಿಂತಿರುಗಿ ವ್ಯಾಪಾರ, ಸಾಕಾಣಿಕೆ, ಕೃಷಿ ಚಟುವಟಿಕೆ ಕಡೆ ಮುಖಮಾಡಿದ್ದಾರೆ. ರಾಜಕಾರಣಿಗಳು ಸಹ ಕೃಷಿಯ ಕಡೆ ಮುಖ ಮಾಡಿದ್ದು ಚಿತ್ರದುರ್ಗದಲ್ಲಿ ಮಾಜಿ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಮೆಕ್ಕೆಜೋಳ ಬಿತ್ತನೆ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ.
ಕೋಟೆ ನಾಡು ಚಿತ್ರದುರ್ಗದಲ್ಲಿ ಒಂದಿಷ್ಟು ಬಿತ್ತನೆಗೆ ಸಾಕಾಗುವಷ್ಟು ಮಳೆ ಬಂದಿದ್ದು ಜಿಲ್ಲೆಯಲ್ಲಿ ಬಹುತೇಕ ಕಡೆ ಬಿತ್ತನೆ ಕಾರ್ಯ ನಡೆಯುತಿದೆ. ಚಿತ್ರದುರ್ಗ ತಾಲ್ಲೂಕಿನ ಸೀಬಾರ ಬಳಿ ಇರೋ ತಮ್ಮ ಜಮೀನಿನಲ್ಲಿ ಆಂಜನೇಯ ತೆಂಗಿನ ತೋಟದಲ್ಲಿ ಮೆಕ್ಕೆಜೋಳ ಬಿತ್ತನೆ ಕಾರ್ಯದಲ್ಲಿ ಮಗ್ನರಾಗಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳಲ್ಕೆರೆ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಆಗಾಗ ಅಲ್ಲಲ್ಲಿ ಸಭೆ ಸಮಾರಂಭ, ಪ್ರತಿಭಟನೆ ಗಳಲ್ಲಿ ಭಾಗವಹಿಸಿ ಕೊಂಡು, ತನ್ನ ಕಾರ್ಯಕರ್ತರನ್ನು ಭೇಟಿ ಮಾಡಿ ಉಳಿದ ಸಮಯದಲ್ಲಿ ತನ್ನ ಜಮೀನಿನಲ್ಲಿ ವಾಸ್ತವ್ಯ ಹೂಡಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.