ಉಡುಪಿ : ಇಲ್ಲಿನ ಪುತ್ತಿಗೆ ಮಠದ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಗಳಿಗೆ ಕೊರೋನಾ ಸೋಂಕು ತಗುಲಿದ್ದು, ಸ್ವಾಮೀಜಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜ್ವರ, ಶೀತ ಇದ್ದಿದ್ದರಿಂದ ಶ್ರೀಗಳು ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ವರದಿಯಲ್ಲಿ ಕೊರೋನಾ ಪಾಸಿಟಿವ್ ಅಂತ ಬಂದಿದೆ. ಸದ್ಯ ಶ್ರೀಗಳು ಆರೋಗ್ಯವಾಗಿದ್ದಾರೆ ಅಂತ ತಿಳಿದುಬಂದಿದೆ.