Saturday, January 18, 2025

ನಿರ್ಮಾಣ ಹಂತದ ಸೇತುವೆ ಕುಸಿತ, ತಪ್ಪಿದ ಬಾರಿ ಅನಾಹುತ

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದ ಆರ್‌ಟಿಒ ಕಚೇರಿ ಮುಂಭಾಗದ ನಿರ್ಮಾಣ ಹಂತದಲ್ಲಿರುವ ಸೇತುವೆ ಸೋಮವಾರ ಸಂಜೆ ದಿಢೀರನೆ ಕುಸಿದಿದೆ.

ಈ ಸೇತುವೆ ಕುಸಿತದಿಂದ  ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸೇತುವೆ ಕಾಮಗಾರಿಯಲ್ಲಿ 10ಕ್ಕಿಂತ ಹೆಚ್ಚು ಕಾರ್ಮಿಕರು ನಿರತರಾಗಿದ್ದರು ಎಂದು ತಿಳಿದು ಬಂದಿದೆ. ಹಳೆಯ ಸೇತುವೆಯನ್ನು ನೆಲಸಮಗೊಳಿಸಿ ಹೊಸ ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿತ್ತು.ಈ ಕುರಿತು ಪ್ರತಿಕ್ರಿಯಿಸಲು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್​​ ಕಿಶೋರ್​ ನಿರಾಕರಿಸಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿ ಕಳಪೆ‌ಮಟ್ಟದ್ದಾಗಿದೆ ಎಂಬ ಆರೋಪ ಕೇಳಿ ಬಂದಿದೆ.

RELATED ARTICLES

Related Articles

TRENDING ARTICLES