ಬೆಂಗಳೂರು : ನೆನ್ನೆ ಮತ್ತೆ ಪರ ವಿರೋಧ ಚರ್ಚೆಗೆ ಕಾರಣವಾಗಿದ್ದ ಟಿಪ್ಪು ಪಠ್ಯ ಕಡಿತ ಹಾಗೂ ಇತರೆ ಪಠ್ಯ ಕಡಿತಕ್ಕೆ ಸಂಬಂದಿಸಿದಂತೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ ..
ಸದ್ಯ ಕೋವಿಡ್-19 ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದ್ದು, ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆಯಲ್ಲಿ ಪಠ್ಯಾಂಶಗಳನ್ನು ಅಂತಿಮಗೊಳಿಸಿಲ್ಲ ಅಂತ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. .
ಈ ಶೈಕ್ಷಣಿಕ ವರ್ಷ ಇನ್ನು ಪ್ರಾರಂಭವಾಗದಿರುವುದರಿಂದ ನಮಗೆ ಎಷ್ಟು ದಿನಗಳು ದೊರೆಯುತ್ತವೆಂಬುದು ಇನ್ನೂ ಅಸ್ಪಷ್ಟವಾಗಿರುವುದರಿಂದ ಸಿಲೆಬಸ್‍ನ್ನು ಅಂತಿಮಗೊಳಿಸಿಲ್ಲ. ಮುಂದಿನ ದಿನಗಳಲ್ಲಿ ಲಭ್ಯ ಅವಧಿಯ ಆಧಾರದ ಮೇಲೆ ಪಠ್ಯ ಕಡಿತವು ವೈಜ್ಞಾನಿಕವಾಗಿರಲಿದ್ದು, ಯಾವುದೇ ಪಠ್ಯವನ್ನು ಅನಗತ್ಯವಾಗಿ ಕಡಿತ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಇದರ ಜೊತೆಗೆ ಇತಿಹಾಸಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ ಸಂಗತಿಯನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ನಾವು ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತೇವೆಯೇ ವಿನಾ ಕೆಡವುವ ಕೆಲಸವನ್ನು ಮಾಡುವುದಿಲ್ಲ ಎಂದು ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸ್ವಾತಿ ಪುಲಗಂಟಿ