Sunday, May 19, 2024

ಶೀಘ್ರದಲ್ಲಿ ಗ್ರಾ.ಪಂ ಚುನಾವಣೆ ಜಿಲ್ಲಾಧಿಕಾರಿಗಳಿಂದ ಅಧಿಸೂಚನೆ ಬಿಡುಗಡೆ

ಬೆಂಗಳೂರು ಗ್ರಾಮಾಂತರ : ರಾಜ್ಯದಲ್ಲಿ ಈಗಾಗಲೇ ಎಲ್ಲ ಗ್ರಾಮ ಪಂಚಾಯಿತಿಯಲ್ಲಿ ಚುನಾಯಿತಿ ಪ್ರತಿನಿಧಿಗಳ ಅಧಿಕಾರ ಅವಧಿ ಬಹುತೇಕ ಮುಕ್ತಾವಾಗಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅರ್ಭಟ ಜೋರಾದ ಕಾರಣ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಇದೀಗ ಕೊರೊನಾ ನಡುವೆಯೇ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡತೆ ಕಾಣುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಆಯಾ ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯಿತಿಗಳ ಕ್ಷೇತ್ರವಾರು ಸದಸ್ಯ ಸ್ಥಾನಗಳ ಹಂಚಿಕೆ ವಿವರಗಳ ಅಧಿಸೂಚನೆಯನ್ನು ಬಿಡುಗಡೆ ಮಾಡಿರುವುದು.

ಕ್ಷೇತ್ರವಾರು ಸದಸ್ಯ ಸ್ಥಾನಗಳ ಹಂಚಿಕೆ ವಿವರಗಳ ಅಧಿಸೂಚನೆ ಬಿಡುಗಡೆ ಮಾಡಿರುವುದನ್ನು ಗಮನಿಸಿದರೆ ಶೀಘ್ರದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುವುದು ಖಚಿತವಾಗಿದೆ. ಇನ್ನೂ ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಕಾಂಕ್ಷಿಗಳು ಮತದಾರರ ಮನವೊಲೈಸುವ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೆಂಬ ಆಕಾಂಕ್ಷಿಗಳು ಮಾಸ್ಕ್, ದಿನಸಿ ಪದಾರ್ಥಗಳು, ಸ್ಯಾನಿಟೈರಿ, ತರಕಾರಿಗಳನ್ನು ವಿತರಣೆ ಮಾಡಿದ್ದಾರೆ. ಇನ್ನೂ ಈ ಬಾರಿ ಕ್ಷೇತ್ರವಾರು ಸದಸ್ಯ ಸ್ಥಾನಗಳ ಹಂಚಿಕೆಯಲ್ಲಿ ಬಾರಿ ಬದಲಾವಣೆಯೊಂದಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಎಂಬ ಮಾತುಗಳ ಸಹ ಕೇಳಿ ಬರುತ್ತಿದೆ. ಇದರಿಂದ ಆಕಾಂಕ್ಷಿಗಳಿಗೆ ಚುನಾವಣೆಗೆ ಸ್ಪರ್ಧೆ ನಡೆಸಲು ಸಾಧ್ಯವಾಗುದಿಲ್ಲ. ಕಳೆದ ಬಾರಿ ಸದಸ್ಯ ಸ್ಥಾನಗಳ ಹಂಚಿಕೆ ಅಧಿಸೂಚನೆಗೂ ಈ ಬಾರಿ ಅಧಿಸೂಚನೆಗೆ ಬಹಳಷ್ಟು ಬದಲಾವಣೆಯೊಂದಿಗೆ ಜಿಲ್ಲಾಧಿಕಾರಿಗಳು ಅಧಿಸೂಚನೆ ಬಿಡುಗಡೆ ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಮಾಡಲಾಗಿದೆ.

RELATED ARTICLES

Related Articles

TRENDING ARTICLES