Sunday, January 19, 2025

ಡಾ. ಬಿ.ಆರ್ ಅಂಬೇಡ್ಕರ್ ಗೆ ಉಟೋಪಚಾರ ನೀಡಿದ್ದ ಸಿದ್ಧವ್ವ ಮೇತ್ರಿ ವಿಧಿವಶ

ಬೆಳಗಾವಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಬೆಳಗಾವಿಗೆ ಬಂದಾಗ ಅವರನ್ನು ತಮ್ಮ ಮನೆಯಲ್ಲಿ ಇರಿಸಿಕೊಂಡು ಉಟೋಪಚಾರ ನೀಡಿದ್ದ ಸಿದ್ಧವ್ವ ಮೇತ್ರಿ(95)ಇಂದು ವಿಧಿವಶರಾಗಿದ್ದಾರೆ .

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ಧವ್ವ, ಇವತ್ತು ಬೆಳಗ್ಗೆ ತಮ್ಮ ನಿವಾಸ ಕಂಗ್ರಾಳಿ ಗಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.

1939ರಲ್ಲಿ ಬೆಳಗಾವಿಗೆ ಆಗಮಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಿದ್ದ ಸಿದ್ಧವ್ವ, ಊಟದ ವ್ಯವಸ್ಥೆ ಮಾಡಿದ್ದರು. ಇದರಿಂದ ತೀವ್ರ ಸಂತೋಷಗೊಂಡ ಅಂಬೇಡ್ಕರ್ ಅವರು, ನಿಮ್ಮಂತ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡಿ, ಸಮಾಜದಲ್ಲಿ ಬೆಳೆಯಬೇಕೆಂದು ಸಲಹೆ ನೀಡಿದ್ದರು. ಇದರಿಂದ ತೀವ್ರ ಪ್ರಭಾವಿತಳಾಗಿದ್ದ ಸಿದ್ಧವ್ವ, ಜೀವಿತ ಅವಧಿಯಲ್ಲಿ ಅಂಬೇಡ್ಕರ್ ಸಿದ್ಧಾಂತದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಇವತ್ತು ಬೆಳಗ್ಗೆ 11ಗಂಟೆಗೆ ಸದಾಶಿವ ನಗರದ ಸ್ಮಶಾನದಲ್ಲಿ ಸಿದ್ಧವ್ವ ಅವರ ಅಂತ್ಯಕ್ರಿಯೆ ನಡೆಯಿತು .

RELATED ARTICLES

Related Articles

TRENDING ARTICLES