Friday, November 22, 2024

ವಾರದಿಂದ ಕೊರೋನಾ ಸೋಂಕಿತರ ಸಾವು ಹೆಚ್ಚಾಗಲು ಕಾರಣವೇನು? ಸಿಡಿಮಿಡಿಗೊಂಡ ಸಚಿವ ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗದಲ್ಲಿ ಇತ್ತೀಚಿನ ದಿನಗಳಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತಲಿದ್ದು, ಇದನ್ನು ನಿಭಾಯಿಸಲು ಕೋವಿಡ್ ಆಸ್ಪತ್ರೆಯ ಸಿಬ್ಬಂದಿ ಸಂಖ್ಯೆ ಹೆಚ್ಚು ಮಾಡಬೇಕೆಂದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಸೂಚನೆ ನೀಡಿದ್ದಾರೆ. ಇಂದು ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಮತ್ತು ವೈದ್ಯರು ಮತ್ತು ನಿರ್ದೇಶಕರ ಜೊತೆ ಸಭೆ ನಡೆಸಿದ ಅವರು, ಈ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಿದ್ದು, ವೈದ್ಯರು ಸಲಹೆ, ಸೂಚನೆ ನೀಡಿ, ಸಿಬ್ಬಂದಿ ಕೊರತೆ ಹೆಚ್ಚು ಮಾಡಿ ಎಂದು ನಿರ್ದೇಶನ ನೀಡಿದ್ರು. ಅಲ್ಲದೇ, ಡಿ ಗ್ರೂಪ್ ಸಿಬ್ಬಂದಿ ಮತ್ತು ಸ್ಟಾಫ್ ನರ್ಸ್ ಗಳು, ವೆಂಟಿಲೇಟರ್​ಗಳ ಕೊರತೆ, ಆಕ್ಸಿಜನ್, ಬೆಡ್ ಗಳ ಕೊರತೆ ಈ ಬಗ್ಗೆ ಗಮನ ಹರಿಸುವಂತೆ, ಜಿಲ್ಲಾಧಿಕಾರಿಗಳಿಗೆ ಈಶ್ವರಪ್ಪ ಸೂಚನೆ ನೀಡಿದ್ರು. ಅಲ್ಲದೇ, ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಮೂಲಭೂತ ಸೌಲಭ್ಯದ ಕೊರತೆ ಮತ್ತು ವೈದ್ಯರಿಂದ ನಿರ್ಲಕ್ಷ್ಯ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ, ಕೊವಿಡ್ ಮತ್ತು ನಾನ್ ಕೊವಿಡ್ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಯಾವ ರೀತಿ ಕ್ರಮಕೈಗೊಳ್ಳಬೇಕೆಂಬ ಬಗ್ಗೆ ಸಲಹೆ ಪಡೆದು ಕ್ರಮ ತೆಗೆದುಕೊಳ್ಳಲು ಸೂಚಿಸಲಾಯಿತು. ಜೊತೆಗೆ, ಕೊರೋನಾ ವಾರಿಯರ್ಸ್ ಗಳಾದ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿಗೆ ಪಾಸಿಟಿವ್ ಬಂದಾಗ ಚಿಕಿತ್ಸೆ ಪಡೆಯಲು ಪ್ರತ್ಯೇಕ ವಾರ್ಡ್ ಅವಶ್ಯಕತೆ ಇದ್ದು, ಈ ಬಗ್ಗೆ ಸಭೆಯಲ್ಲಿ ಸಚಿವರ ಗಮನಸೆಳೆಯಲಾಯಿತು. ಲೋಪದೋಷಗಳು ಸೇರಿದಂತೆ, ಅಗತ್ಯತೆಗಳ ಬಗ್ಗೆ, ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಮ್ಸ್ ಆಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು. ಕೋವಿಡ್ ರೋಗಿಗಳು ಮತ್ತು ಅವರ ಸಂಬಂಧಿಕರಿಂದ ಹಲವಾರು ದೂರು ಬರುತ್ತಿರುವ ಹಿನ್ನಲೆಯಲ್ಲಿ ಪ್ರತಿ ದೂರನ್ನು ಶಾಸಕರೇ ಬಗೆಹರಿಸಲು ಸಾಧ್ಯವಿಲ್ಲ. ಸಂಬಂಧಿಸಿದ ಅಧಿಕಾರಿಗಳು ಮತ್ತು ವೈದ್ಯರು ತಮ್ಮ ಆತ್ಮ ಸಾಕ್ಷಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಈಶ್ವರಪ್ಪ, ಸೂಚಿಸಿದರು.

ಈಗಾಗಲೇ ಇನ್ನೂ 450 ಬೆಡ್​​ಗಳ ವ್ಯವಸ್ಥೆ ಕೊವಿಡ್ ಮತ್ತು ನಾನ್ ಕೊವಿಡ್ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಾಡಲಾಗುತ್ತಿದ್ದು, ಅಗತ್ಯವಿದ್ದರೆ, ಖಾಸಗಿ ಆಸ್ಪತ್ರೆಗಳಲ್ಲೂ ಕೂಡ ಬೆಡ್ ಒದಗಿಸಲು ಕ್ರಮಕೈಗೊಳ್ಳಲಾಗಿದ್ದು, ಸದ್ಯಕ್ಕೆ ಸುಬ್ಬಯ್ಯ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ 100 ಬೆಡ್​ಗಳ ವ್ಯವಸ್ಥೆ ಮಾಡಲಾಗಿದೆಯಲ್ಲದೆ, ಕಳೆದೊಂದು ವಾರಗಳಿಂದ, ಕೊರೋನಾ ಸೋಂಕಿತರ ಸಾವಿನ ಸಂಖ್ಯೆ ಏರುತ್ತಿರುವುದಕ್ಕೆ ಕಾರಣವೇನೆಂದು ವೈದ್ಯರಿಗೆ ಈಶ್ವರಪ್ಪ ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಡಿ.ಎಸ್. ಅರುಣ್, ಸಿಇಓ ಎಂ.ಎಲ್. ವೈಶಾಲಿ, ಎಡಿಸಿ ಅನುರಾಧಾ, ಸಿಮ್ಸ್ ನಿರ್ದೇಶಕ ಡಾ. ಸಿದ್ದಪ್ಪ, ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್, ಜಿಲ್ಲಾ ಸರ್ಜನ್ ಡಾ. ರಘುನಂದನ್, ಆಸ್ಪತ್ರೆ ಸಲಹಾ ಸಮಿತಿಯ ಡಾ. ಗೌತಮ್, ಡಾ. ವಾಣಿಕೋರಿ, ದಿವಾಕರ್ ಶೆಟ್ಟಿ ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES