Thursday, January 23, 2025

ಸ್ವ್ಯಾಬ್ ‌ಸಂಗ್ರಹಣೆಗೆ NSS ವಿದ್ಯಾರ್ಥಿಗಳ ಬಳಕೆಗೆ ನಿರ್ಧಾರ..!

ಬೆಂಗಳೂರು : ನಗರದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆ
ಗಂಟಲು ದ್ರವ ಸಂಗ್ರಹಣೆಗೆ ಸಿಬ್ಬಂದಿ ಅಗತ್ಯ ಹೆಚ್ಚಾಗಿದೆ. ಹೀಗಾಗಿ NSS ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಸದ್ಯ ನಿರ್ಧರಿಸಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಎನ್‌ಎಸ್‌ಎಸ್‌ ಅಧಿಕಾರಿ ಗಣನಾಥ ಶೆಟ್ಟಿ ಅವರಿಗೆ ಬಿಬಿಎಂಪಿ ಆಯುಕ್ತರಾದ ಮಂಜುನಾಥ್ ಪ್ರಸಾದ್ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸ್ವ್ಯಾಬ್‌ ಘಟಕಗಳನ್ನು ಹೆಚ್ಚಿಸಲಾಗುತ್ತಿದೆ ಆದ್ದರಿಂದ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳನ್ನು ಕಾಲೇಜುಗಳಿಂದ ನಿಯೋಜಿಸುವಂತೆ ಮನವಿ ಮಾಡಿದ್ದಾರೆ. ಇನ್ನೂ ಸ್ವ್ಯಾಬ್‌ ಸಂಗ್ರಹಣೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸಿಕ 14 ಸಾವಿರ ರೂ. ಗೌರವಧನ, ವಾಹನ ವ್ಯವಸ್ಥೆ ನೀಡುವುದಾಗಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES