ಹುಬ್ಬಳ್ಳಿ : ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣದಲ್ಲಿ ಸಂಪೂರ್ಣ ವಿಫಲವಾಗಿದೆ. ತೀವ್ರ ನಿರ್ಲಕ್ಷ್ಯ ತೋರುತ್ತಿದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಆರೋಪಿಸಿದ್ದಾರೆ. ಮಾಚ್೯ ತಿಂಗಳಲ್ಲಿ ಕೋವಿಡ್ ಕಾಣಿಸಿಕೊಂಡಿತ್ತು ಆಗ ಎರಡು ತಿಂಗಳು ಸರಕಾರ ಮಲಗಿತ್ತಾ? ಈಗ ಹಾಸಿಗೆ ವ್ಯವಸ್ಥೆ ಮಾಡಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಮಹಾಮಾರಿ ಕೊರೋನಾ ರಾಷ್ಟ್ರಕ್ಕೆ ವ್ಯಾಪಿಸುತ್ತಿದ್ದಂತೆ ಅದರ ನಿರ್ಮೂಲನೆ ಕಾರ್ಯದಲ್ಲಿ ಸರಕಾರಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಸಹಕಾರ ನೀಡಿದ್ದೇವೆ. ಈ ವೇಳೆಯಲ್ಲಿ ಒಂದು ಜವಾಬ್ದಾರಿಯುತ ವಿರೋಧಪಕ್ಷವಾಗಿ ಸರಕಾರದ ಲೋಪದೋಷಗಳನ್ನು ಜನರ ಮುಂದಿಡುವುದು ನಮ್ಮ ಜವಾಬ್ದಾರಿ. ಅದನ್ನು ಆಡಳಿತ ಪಕ್ಷ ಒಪ್ಪಿಕೊಂಡು ತಿದ್ದಿಕೊಳ್ಳಬೇಕು. ಅದನ್ನು ಬಿಟ್ಟು ವಿರೋಧಿಸುವುದು ಖಂಡನೀಯ. ಉಪಕರಣಗಳ ಖರೀದಿ ಬಗ್ಗೆ ಲೆಕ್ಕ ಕೋಡಿ ಎಂದು ಕೇಳಿದ್ದೆವೆ, ತನಿಖೆಯಿಂದ ತಪ್ಪಿಸಿಕೊಂಡು ಓಡಿ ಹೋಗಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನೂ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಯಾಗುತ್ತಿದ್ದಂತೆ ಕೋವಿಡ್ ನಿಯಂತ್ರಣ ಕಂಡುಬಂದರೂ ಸಹ ಆ ವೇಳೆಯಲ್ಲಿ ಜನರ ಜೀವನ ಅತಂತ್ರವಾಯಿತು. ಮೊದಲು ಮಹಾರಾಷ್ಟ್ರ, ಗುಜರಾತ್, ದೆಹಲಿ ಸೇರಿದಂತೆ ಇತರ ರಾಜ್ಯಗಳು ಕೊರೋನಾ ಹಾಟ್ ಸ್ಪಾಟ್ ಗಳಾಗಿದ್ದವು. ಆದರೆ ಇದೀಗ ಅಲ್ಲಿ ಕೊರೋನಾ ನಿಯಂತ್ರಣಕ್ಕೆ ಬರುತ್ತಿದ್ದರೆ, ರಾಜ್ಯದಲ್ಲಿ ಕಡಿಮೆ ಪ್ರಮಾಣದಲ್ಲಿ ಇದ್ದ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ದೇಶದ ಅಂಕಿ ಅಂಶಗಳಿಗೆ ತದ್ವಿರುದ್ಧವಾಗಿದೆ. ಕೋವಿಡ್ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಹಾಗೂ ರಾಷ್ಟ್ರದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ರು..