Thursday, December 19, 2024

‘ಸರಿಯಾದ ಆಡಳಿತ ನಡೆಸಲು ಪ್ರತಿಪಕ್ಷದವರು ನೀಡುತ್ತಿರುವ ಇಂಜೆಕ್ಷನ್ ಇದು’: ಯು.ಟಿ ಖಾದರ್

ಕೊಪ್ಪಳ: ಜಿಲ್ಲೆಯಲ್ಲಿ ಇಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಮಾಜಿ ಸಚಿವರುಗಳು ರಸ್ತೆಗಿಳಿದು ಲೆಕ್ಕಕೊಡಿ.ಉತ್ತರ ಕೊಡಿ ಎಂದು ಪ್ರತಿಭಟನೆ ಮಾಡಿದರು. ಪ್ರತಿಭಟನೆಗೂ ಮುನ್ನ ಪತ್ರಿಕಾಗೋಷ್ಠಿ ನೆಡಸಿದ ಸಚಿವರುಗಳು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದರು.ಈ ವೇಳೆ ಮಾತನಾಡಿದ ಮಾಜಿ ಸಚಿವ ಯು.ಟಿ ಖಾದರ್ ಕೊವಿಡ್19 ನಿರ್ವಹಣೆ ಮಾಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನೆಡಸಿದರು.

ರಾಜ್ಯದಲ್ಲಿರುವ ಬಿಜೆಪಿ ಸರಕಾರ ಕೊರೋನ ನಿಯಂತ್ರಣದಲ್ಲಿ ವಿಫಲವಾಗಿದೆ. ಸಂಶಯಾಸ್ಪದ ನಡೆಯಿಂದ ಹಗರಣ ಆಗಿರುವುದು ಬಹುತೇಕ ಸ್ಪಷ್ಟವಾಗಿರುವುದು ಕಂಡುಬಂದಿದೆ. ಈ ಬಗ್ಗೆ ತನಿಖೆಯೂ ಇಲ್ಲ ಏನೂ ಇಲ್ಲಾ. ನಾಲ್ಕೈದು ಮಂತ್ರಿಗಳು ಡೈಲಾಗ್ ಹೊಡೆದದ್ದೇ ದೊಡ್ಡ ಸಾಧನೆಯಾಗಿದೆ ಎಂದು‌ ರಾಜ್ಯ ಬಿಜೆಪಿ ಸರ್ಕಾರದ ಸಚಿವರಗಳ‌ ಮೇಲೆ ಹರಿಹಾಯ್ದರು. ಸ್ವಚ್ಛ, ಪಾರದರ್ಶಕ ಸರಕಾರ ನಡೆಸಬೇಕಾದರೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಜನರಿಗೆ ಕೊರೋನ ನಿಯಂತ್ರಣ, ನಿರ್ವಹಣೆಯ ಲೆಕ್ಕಾಚಾರ ಜನರಿಗೆ ತಿಳಿಸಲಿ ಕ್ವಾಲಿಟಿ ಇಲ್ಲದ ಪಿಪಿಇ ಕಿಟ್, ಮಾಸ್ಕ್‌ಗಳನ್ನು ಡಾಕ್ಟರ್, ವೈದ್ಯಕೀಯ ಸಿಬ್ಬಂದಿಗೆ ನೀಡಿತ್ತು. ಈ ಕುರಿತು ವ್ಯದ್ಯರ ಪ್ರತಿಭಟನೆ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಲಾಕ್‌ಡೌನ್ ವೇಳೆ ಸರಕಾರಕ್ಕೆ ಪ್ರತಿಪಕ್ಷದವರು ಸಹಕಾರ ನೀಡಿದ್ದೇವೆ.

ರಾಜ್ಯದ ಜನರು ಬದುಕಬೇಕೆಂದರೆ ದೇವರೇ ಕಾಪಾಡಬೇಕು ಅಂತ ಆರೋಗ್ಯ ಮಂತ್ರಿಗಳೆ ಹೇಳಿಕೆ ನೀಡಿ ಕೈ ಚೆಲ್ಲುತ್ತಾರೆ. ಮಾಡಿರುವ ಹಗರಣವನ್ನು ಸರಕಾರ ಒಪ್ಪಲೇಬೇಕು. ತನಿಖೆಗೂ ಸರಕಾರ ಒಪ್ಪಬೇಕು.ಕಾಂಗ್ರೆಸ್ ಸರಕಾರ ಇದ್ದಾಗ ಆರೋಪ ಬಂದಾಗ ಪ್ರತಿಪಕ್ಷದ ಬೇಡಿಕೆಗಳಿಗೆ ಸ್ಪಂದಿಸುತ್ತಿತ್ತು ಆದರೆ ಈ ಸರಕಾರ ಆರೋಪಗಳನ್ನು ಸಹಿಸುತ್ತಿಲ್ಲ, ಸಹಕಾರವನ್ನು ನೀಡುತ್ತಿಲ್ಲ ಸರಿಯಾದ ಆಡಳಿತ ನಡೆಸಲು ಪ್ರತಿಪಕ್ಷದವರು ನೀಡುತ್ತಿರುವ ಇಂಜೆಕ್ಷನ್ ಇದು. ಕಾಯಿಲೆ‌ ಹೆಚ್ಚುತ್ತಿರುವುದಕ್ಕೆ, ಸಾವು ಹೆಚ್ಚುತ್ತಿರುವುದಕ್ಕೆ, ಅಮಾನವೀಯ ಶವಸಂಸ್ಕಾರಕ್ಕೆ ಸರಕಾರದ ನಿರ್ವಹಣೆ ಮತ್ತು ಕೊರತೆಯೇ ಕಾರಣ ಎಂದು ಆರೋಪಿಸಿದರು. ಇನ್ನೂ ಮಂತ್ರಿಗಳ ನಡುವೆ ಇರುವ ಆಂತರಿಕ ರಾಜಕೀಯ ಗೊಂದಲದಿಂದ ಜನರು‌ ಯಾಕೆ ಶಿಕ್ಷೆ ಅನುಭವಿಸಬೇಕು ಕಳೆದ ಮೂರು ತಿಂಗಳಲ್ಲಿ ಕೊರೋನಾಗೆ ಸಂಬಂಧಿಸಿದಂತೆ ಎಷ್ಟು ಆದೇಶಗಳನ್ನು ಸರಕಾರ ಹೊರಡಿಸಿದೆ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ ಇದು ಮಾನವಿಯತೆ, ಕರುಣೆ ಇಲ್ಲದ ಸರ್ಕಾರ, ಕಾಂಗ್ರೆಸ್ ಪಕ್ಷ ರಾಜ್ಯ ಸರಕಾರದ ಈ ಧೋರಣೆಯನ್ನು ಖಂಡಿಸುತ್ತದೆ. ಜನರ ಕಷ್ಟ ಅರಿಯಲು ಪ್ರತಿ ಜಿಲ್ಲೆಯಲ್ಲೂ ಕೆಎಎಸ್ ಅಧಿಕಾರಿಗಳ ಸಮೇತ ಸಮಿತಿ‌ ಮಾಡಲಿ ಹಾಗೂ ಐಎಎಸ್ ಅಧಿಕಾರಿ ಕಮಿಟಿಯ ನೇತೃತ್ವ ವಹಿಸಲಿ ಎಂದು ಸರ್ಕಾರಕ್ಕೆ ಸಲಹೆ‌ ನೀಡಿದರು.

-ಶುಕ್ರಾಜ ಕುಮಾರ್

RELATED ARTICLES

Related Articles

TRENDING ARTICLES