Wednesday, January 22, 2025

ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಡಿಸಿ ಪತ್ನಿಗೆ ಹೆರಿಗೆ

ಗದಗ: ಕೊರೋನ ಮಧ್ಯೆಯೂ ಐಶಾರಾಮಿ ಸವಲತ್ತುಗಳನ್ನು ಬದಿಗೆ ತಳ್ಳಿ ಪತ್ನಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ಮೂಲಕ ಸರಳತೆ ಮೆರೆದಿದ್ದಾರೆ ಗದಗ ಜಿಲ್ಲಾಧಿಕಾರಿ ಸುಂದರೇಶ್ ಬಾಬು. ನಗರದ ಕೆಸಿ ರಾಣಿ ರಸ್ತೆಯ ದುಂಡಪ್ಪ‌ ಮಾನ್ವಿ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದಾರೆ ವೈದ್ಯರು.

ಡಿಸಿ ಪತ್ನಿ ಸದ್ಯ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ. ಸರ್ಕಾರಿ ಆಸ್ಪತ್ರೆ ಎಂದ್ರೆ ಮೂಗು ಮುರಿಯುವ ಜನ್ರಿಗೆ, ಸರಕಾರಿ ವೈದ್ಯರ‌ ಮೇಲೆ ನಂಬಿಕೆ ಇಟ್ಟು ತಮ್ಮ ಪತ್ನಿಗೆ ಹೆರಿಗೆ ಮಾಡಿಸಿದ ಡಿಸಿ ನಡೆ ಇತರರಿಗೆ ಮಾದರಿಯಾಗಿದೆ. ಸರಳತೆ ಮೆರೆದ ಡಿಸಿ ನಡೆ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳ ಸಹವಾಸವೇ ಬೇಡ ಅನ್ನೊರು ಜಾಸ್ತಿ ಜನರಿದ್ದಾರೆ. ಆದ್ರೆ ಸರ್ಕಾರಿ ವೈದ್ಯರ ಮೇಲಿನ ನಂಬಿಕೆಯಿಂದ ಡಿಸಿ ಒಳ್ಳೆಯ ನಿರ್ಧಾರಕ್ಕೆ ಬಂದಿದ್ದು, ವೈದ್ಯರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.

RELATED ARTICLES

Related Articles

TRENDING ARTICLES