Monday, December 23, 2024

ಕಳೆದ ಒಂದು ದಶಕದಲ್ಲಿ 40ಸಾವಿರ ಎಕ್ರೆ ಕಾನು ಅರಣ್ಯ ರಕ್ಷಣೆ – ಅನಂತ ಹೆಗಡೆ ಅಶೀಸರ

ಶಿವಮೊಗ್ಗ: ಜಿಲ್ಲೆಯಲ್ಲಿ ಕಾನು ಅರಣ್ಯ ಸಂರಕ್ಷಣಾ ಯೋಜನೆ ಜಾರಿಗೊಳಿಸಿದ ಬಳಿಕ  ಕಳೆದ ಒಂದು ದಶಕದಲ್ಲಿ ಸುಮಾರು 40 ಸಾವಿರ ಎಕರೆ ಕಾನು ಅರಣ್ಯ ಪ್ರದೇಶ ಸಂರಕ್ಷಣೆ ಸಾಧ್ಯವಾಗಿದೆ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಕಾನು ಅರಣ್ಯಗಳು ಕುರಿತಾದ ವರದಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸುಮಾರು 2 ಲಕ್ಷ ಎಕರೆಯಷ್ಟಿದ್ದ ಕಾನು ಅರಣ್ಯ ಪ್ರದೇಶ ಇದೀಗ 1.40 ಲಕ್ಷ ಎಕರೆಗೆ ಇಳಿದಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಇನ್ನೂ 70 ಲಕ್ಷ ಕಾನು ಅರಣ್ಯ ಪ್ರದೇಶ ಸಂರಕ್ಷಿಸುವ ಗುರಿಯನ್ನು ಹೊಂದಲಾಗಿದ್ದು, ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಈ ಕುರಿತು ಪರಿಶೀಲಿಸಲು ಭಾರತೀಯ ವಿಜ್ಞಾನ ಸಂಸ್ಥೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕ್ರಿಯಾ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಕಂದಾಯ ಅರಣ್ಯಭೂಮಿ (ಡೀಮ್ಡ್ ಅರಣ್ಯ)ಯಿದ್ದು, ಇದರಲ್ಲಿ ಬಹುತೇಕ ಕಾನು ಅರಣ್ಯವಾಗಿದೆ. ಪ್ರತಿ ಗ್ರಾಮದ ಕಾನು ಅರಣ್ಯಗಳನ್ನು ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ಜಿಪಿಎಸ್ ಮೂಲಕ ಗಡಿ ಗುರುತಿಸಿ ನಕ್ಷೆ ರಚಿಸಬೇಕು. ಜಲಾನಯನ ಅಭಿವೃದ್ಧಿ ಯೋಜನೆಗಳಲ್ಲಿ ಕಾನು ಅರಣ್ಯ ಸಂರಕ್ಷಣೆಯನ್ನೂ ಸೇರಿಸಬೇಕು. ಈ ವ್ಯಾಪ್ತಿಯಲ್ಲಿ ಕಿರು ಅರಣ್ಯ ಉತ್ಪತ್ತಿ ಸಂಗ್ರಹಕ್ಕೆ ಕಡಿವಾಣ ಹಾಕಬೇಕು ಇತ್ಯಾದಿ ಶಿಫಾರಸ್ಸುಗಳನ್ನು ವರದಿ ಮಾಡಲಾಗಿದೆ ಎಂದರು.

RELATED ARTICLES

Related Articles

TRENDING ARTICLES