ಮಂಗಳೂರು : ಕೊರೋನಾ ಮಹಾಮಾರಿಯ ಅಟ್ಟಹಾಸ ಶುರುವಾದ ಬಳಿಕ ಇದೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆ ಸಂಖ್ಯೆಯಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಭಾನುವಾರ 132 ಹೊಸ ಪ್ರಕರಣಗಳು ದಾಖಲಾಗಿದ್ದರೆ, 195 ಮಂದಿ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಆದರೆ, ಸೋಂಕಿಗೆ ಬಲಿಯಾಗುವವರ ಸಂಖ್ಯೆಯೂ ಅಧಿಕವಾಗಿದ್ದು, ಭಾನುವಾರ ಆರು ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಒಟ್ಟು 220 ಮಂದಿ ಕೊರೋನಾದಿಂದ ಮೃಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 3,305 ಸಕ್ರಿಯ ಪ್ರಕರಣಗಳಿವೆ.
-ಇರ್ಷಾದ್ ಕಿನ್ನಿಗೋಳಿ