Wednesday, January 8, 2025

🕚 JUST IN :

ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ತಮ್ಮ ಆಕ್ರೋಶ ವ್ಯಕ್ತ ಪಡಿಸಿದ ಗ್ರಾಮಸ್ಥರು

ಹಾವೇರಿ : ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಹಾದು ಹೋಗಿರುವ ಶಿವಮೊಗ್ಗ – ಗದಗ ರಾಜ್ಯ ಹೆದ್ದಾರಿಯಲ್ಲಿ ಜನರು ವಿನೂತನವಾಗಿ ಭತ್ತದ ನಾಟಿ ಮಾಡುವ ಮೂಲಕ  ಆಡಳಿತದ ಗಮನ ಸೇಳೆದರು. ನಿನ್ನೆ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಹಳ್ಳೂರು ಗ್ರಾಮದಲ್ಲಿ ಹಾದು ಹೋಗಿರುವ ರಾಜ್ಯ ಹೆದ್ದಾರಿ-26, ಕಳೆದ ಮೂವತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ರಸ್ತೆ ಕೆಸರು ಗದ್ದೆಯಾಗಿ ನಿರ್ಮಾಣವಾಗಿದೆ. ಆದರೆ ಜಿಲ್ಲಾಡಳಿತ, ತಾಲ್ಲೂಕಾಡಳಿತ ಮಾತ್ರ ಇತ್ತ ಗಮನ ಹರಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದರು.

ರಟ್ಟಿಹಳ್ಳಿ ತಾಲ್ಲೂಕು ಹಳ್ಳೂರು ಗ್ರಾಮದಿಂದ ಸುಮಾರ 25 ಕಿ.ಮಿ. ರಸ್ತೆ ಹಾಳಾಗಿದೆ. ಈ ರಸ್ತೆಯನ್ನು ದುರಸ್ಥಿ ಮಾಡುವಂತೆ ಹಲವು ಬಾರಿ ಒತ್ತಾಯಿಸಿದರೂ ಸಹ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಬಾರಿ‌ ಹೆಚ್ಚು ಮಳೆಯಾದ ಪರಿಣಾಮ ರಾಜ್ಯ ಹೆದ್ದಾರಿ ಭತ್ತದ ಗದ್ದೆಯಾಗಿ ಮಾರ್ಪಟ್ಟಿದೆ. ಇದರಿಂದ ತಕ್ಷಣ ಜಿಲ್ಲಾಡಳಿತ ರಸ್ತೆ ದುರಸ್ತಿಗೆ ಮುಂದಾಗಬೇಕೆಂದು ಒತ್ತಾಯಿಸಿ, ರಸ್ತೆಯಲ್ಲಿ ಭತ್ತದ ನಾಟಿ ಮಾಡಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.

RELATED ARTICLES

Related Articles

TRENDING ARTICLES