Tuesday, January 21, 2025

ಅಂತರ್ ರಾಜ್ಯ ಗಾಂಜಾ ಸಾಗಾಟದಾರರ ಬೃಹತ್ ಜಾಲ ಪತ್ತೆಹಚ್ಚಿದ ದಕ್ಷಿಣ ಕನ್ನಡ ಪೊಲೀಸರು

ದಕ್ಷಿಣ ಕನ್ನಡ : ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲ ಪತ್ತೆಹಚ್ಚಿದ ಪುತ್ತೂರು ನಗರ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಸರಕು ಸಮೇತ ಅರೆಸ್ಟ್ ಮಾಡಿದ್ದಾರೆ.

ಬಂಧಿತರನ್ನು ಕಾಸರಗೋಡು ದೂರ್ಮಕ್ಕಾಡ್‌ ನಿವಾಸಿ ಇಬ್ರಾಹೀಂ ಯಾನೆ ಅರ್ಷದ್ ಯಾನೆ ಅಚ್ಚು ( 26), ಹೊಸಂಗಡಿ ಮೀಜರ್ ಪಳ್ಳ ನಿವಾಸಿ ಮುಹಮ್ಮದ್ ಶಫೀಕ್ (31), ಬಂಟ್ವಾಳ ತಾಲೂಕು ಕನ್ಯಾನ ನಿವಾಸಿ ಖಲಂದರ್ ಶಾಫಿ (26) ಎಂದು ಗುರುತಿಸಲಾಗಿದೆ.

ಬಂಧಿತರಿಂದ 17 ಲಕ್ಷ ರೂ. ಮೌಲ್ಯದ ಸುಮಾರು 175 ಕೆ.ಜಿ ಗಾಂಜಾ, ಸಾಗಾಟಕ್ಕೆ ಬಳಸಿದ ಸುಮಾರು 3 ಲಕ್ಷ ಮೌಲ್ಯದ ಪಿಕ್ ಅಪ್ ವಾಹನ, ಸುಮಾರು 4 ಲಕ್ಷ‌ ರೂ. ಮೌಲ್ಯದ ಕಾರು ಸೇರಿದಂತೆ ಒಟ್ಟು 24.5 ಲಕ್ಷ ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ಬಂಟ್ವಾಳ ತಾಲ್ಲೂಕು ಕೆದಿಲ ಗ್ರಾಮದ ಪಾಟ್ರಕೋಡಿ ಮಾರ್ಗವಾಗಿ ಗಾಂಜಾ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಗಳ‌ ಸಹಿತ ಅಪಾರ ಪ್ರಮಾಣದ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ ವಾಹನಗಳನ್ನು ವಶಕ್ಕೆ ಪಡೆದು ಕಲಂ 8 (C) r/w 20(b) (ii) C ಎನ್.ಡಿ.ಪಿ.ಎಸ್ ಕಾಯಿದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳ ಪೈಕಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು ಎಂಬಾತನ ವಿರುದ್ದ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ 2 ಪ್ರಕರಣ ಹಾಗೂ ಖಲಂದರ್ ಶಾಫಿ ಎಂಬಾತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ 2 ಅಕ್ರಮ ಗಾಂಜಾ ಪ್ರಕರಣ ಹಾಗೂ 1 ಕೊಲೆ ಯತ್ನ ಪ್ರಕರಣ ಮತ್ತು ಕಾವೂರು ಠಾಣೆಯಲ್ಲಿ 1 ಅಕ್ರಮ ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ.

-ಇರ್ಷಾದ್ ಕಿನ್ನಿಗೋಳಿ

RELATED ARTICLES

Related Articles

TRENDING ARTICLES