Monday, December 23, 2024

ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಪತ್ರ ಚಳುವಳಿ..!

ಕೊಪ್ಪಳ : ಪತ್ರಕರ್ತರ ಮೇಲೆ ನಡೆಯುವ ಹಲ್ಲೆಗಳು ತಡೆಗೆ ಕಾಯ್ದೆ ರೂಪಿಸಬೇಕು ಎಂದು ಕೊಪ್ಪಳ ಮೀಡಿಯಾ ಕ್ಲಬ್ ಪತ್ರಕರ್ತರು ಪತ್ರ ಚಳುವಳಿ ಆರಂಭಿಸಿದ್ದಾರೆ.

ಪದೇ ಪದೇ ಪತ್ರಕರ್ತರ ಮೇಲೆ ಒಂದಲ್ಲ ಒಂದು ರೀತಿಯ ಹಲ್ಲೆಗಳು ನಡೆಯುತ್ತಿವೆ. ಸಮಾಜದ ಸ್ವಾಸ್ಥ್ಯ ಕಾಪಾಡಲು ಶ್ರಮಿಸುವ ಪತ್ರಕರ್ತರಿಗೆ ರಕ್ಷಣೆ ಇಲ್ಲವಾಗಿದೆ. ಹೀಗಾಗಿ ಪತ್ರಕರ್ತರು ಜೀವ ಭಯದಲ್ಲಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪತ್ರಕರ್ತರ ರಕ್ಷಣೆ ಕೂಡ ಸರರ್ಕಾರದ ಜವಬ್ದಾರಿ. ಹೀಗಾಗಿ ವೈದ್ಯರ ಹಲ್ಲೆ ತಡೆಗೆ ಇರುವ ಕಾಯ್ದೆ ವ್ಯಾಪ್ತಿಗೆ ಪತ್ರಕರ್ತರನ್ನು ಒಳಪಡಿಸಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಪತ್ರ ಮಖೇನ ಮುಖ್ಯಮಂತ್ರಿಗಳಿಗೆ ಆಗ್ರಹಿಸಲಾಗಿದೆ.

ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಈ ಕುರಿತು ಸರ್ಕಾರ ಸಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಂಡು ಸಮಾಜದ ಸ್ವಾಸ್ಥ್ಯ ಕಾಪಾಡಲು ಶ್ರಮಿಸುವ ಪತ್ರಕರ್ತರಿಗೆ ರಕ್ಷಣೆ ನೀಡಬೇಕು.ಅದರಂತೆ ಪತ್ರಕರ್ತರಿಗೆ ವಿಶೇಷ ವಿಮೆಯನ್ನು ಸಹ ಸರ್ಕಾರವೇ ಮಾಡಬೇಕು ಎಂದು ಪತ್ರಕರ್ತರು ಒತ್ತಾಯಿಸಿದ್ದಾರೆ. ಬೆಂಗಳೂರಿನ ಕೆ.ಜಿ.ಹಳ್ಳಿ ಗಲಭೆಗೆ ಕಾರಣರಾದವರನ್ನು  ಕೂಡಲೇ ಬಂಧಿಸಿ, ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

-ಶುಕ್ರಾಜ ಕುಮಾರ

RELATED ARTICLES

Related Articles

TRENDING ARTICLES