Sunday, December 22, 2024

ಮತೀಯ ಗಲಭೆ ಹಬ್ಬಿಸುತ್ತಿರುವ ಸಂಘಟನೆಗಳನ್ನು ನಿಷೇಧಿಸಲು ಆಗ್ರಹ

ಶಿವಮೊಗ್ಗ: ಮತೀಯ ಗಲಭೆ ಹಬ್ಬಿಸುತ್ತಿರುವ ಎಸ್‍ಡಿಪಿಐ ಮತ್ತು ಪಿಎಫ್‍ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ, ಇಂದು ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ರು. ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆಯ ಹಿಂದೆ ಎಸ್‍ಡಿಪಿಐ ಮತ್ತು ಪಿಎಫ್‍ಐ ಸಂಘಟನೆಗಳು ಭಾಗಿಯಾಗಿರುವುದು ಸ್ಪಷ್ಟವಾಗಿದೆ. ಇಂತಹ ರಕ್ಕಸ ಕೃತ್ಯಕ್ಕೆ ಕುಮ್ಮಕ್ಕು ಕೊಟ್ಟ ಈ ಸಂಘಟನೆಗಳನ್ನು ತಕ್ಷಣವೇ ನಿಷೇಧಿಸಬೇಕು. ಈ ಘಟನೆಯ ಹಿಂದೆ ಷಡ್ಯಂತ್ರವೇ ಅಡಗಿದ್ದು, ಇದು ವ್ಯವಸ್ಥಿತವಾದ ಸಂಚೇ ಆಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಈ ಘಟನೆಯಲ್ಲಿ ಮನೆಗಳಿಗೆ ಕಲ್ಲು ತೂರಲಾಗಿದೆ. ಪೊಲೀಸ್ ಮತ್ತು ಮಾಧ್ಯಮ ಸಿಬ್ಬಂದಿಯವರ ಮೇಲೆ ಹಲ್ಲೆ ಮಾಡಲಾಗಿದೆ. ನೂರಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಇದೊಂದು ಪೈಶಾಚಿಕ ಕೃತ್ಯವಾಗಿದೆ. ಮಂಗಳೂರಿನಲ್ಲಿ ನಡೆದ ಗಲಭೆಯ ಮುಂದುವರೆದ ಭಾಗವೇ ಇದಾಗಿದೆ. ಜನರು ಭಯಭೀತರಾಗಿದ್ದಾರೆ. ಇದೊಂದು ರಾಷ್ಟ್ರವಿದ್ರೋಹಿ ಕೃತ್ಯವಾಗಿದೆ. ಪಾಕಿಸ್ತಾನದ ಐಎಸ್‍ಐ ಸಂಘಟನೆಯ ಕೈವಾಡ ಶಂಕೆಯೂ ಇದೆ. ಈ ಘಟನೆಯನ್ನು ರಾಷ್ಟ್ರೀಯ ತನಿಖಾದಳದ ಮೂಲಕ ತನಿಖೆ ನಡೆಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ರು.

RELATED ARTICLES

Related Articles

TRENDING ARTICLES