Tuesday, January 21, 2025

ಕೋಲಾರದಲ್ಲಿ ಆಗಸ್ಟ್ 18 ರಂದು ಜೆಡಿಎಸ್ ಬೃಹತ್ ಪ್ರತಿಭಟನೆ

ಕೋಲಾರ : ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ, ಕೋಲಾರದಲ್ಲಿ ಜಿಲ್ಲಾ ಜೆಡಿಎಸ್ ಘಟಕ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಕೋಲಾರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡ ಅಧ್ಯಕ್ಷತೆಯಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಯಿತು. ಆಗಸ್ಟ್ 18 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನಾ ಧರಣಿ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಾದ ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನ ಖಂಡಿಸಿ ಪ್ರತಿಭಟನೆ ಹಮ್ಮಿಕೊಂಡಿದೆ. ಜೆಡಿಎಸ್ ಎಎಲ್ಎ ಶ್ರೀನಿವಾಸಗೌಡ, ಎಂಎಲ್ಸಿ ಗೋವಿಂದರಾಜು ನೇತೃತ್ವದಲ್ಲಿ ಪ್ರತಿಭಟನಾ ಧರಣಿ ನಡೆಯಲಿದ್ದು, ಪ್ರತಿಭಟನೆಯಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ಆರ್.ಶ್ರೀನಿವಾಸಮೂರ್ತಿ, ಪವರ್ ಟಿವಿ, ಕೋಲಾರ.

RELATED ARTICLES

Related Articles

TRENDING ARTICLES