Tuesday, January 21, 2025

ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ತುಮಕೂರು : ಬೆಂಗಳೂರಿನ ಕೆ.ಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನ ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಕಿಡಿಗೇಡಿಗಳು ನಡೆಸಿದ ಹಲ್ಲೆಯನ್ನ ಖಂಡಿಸಿ ತುಮಕೂರಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಚಿ ನಿ ಪುರುಶೋತ್ತಮ್ ನೇತೃತ್ವದಲ್ಲಿ ಪತ್ರಕರ್ತರು ಪ್ರತಿಭಟನೆ ನಡೆಸಿದರು.
ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ಮಾಡುವ ಮೂಲಕ ಹಲ್ಲೆಕೋರರನ್ನು ಬಂದಿಸುವಂತೆ ಒತ್ತಾಯಿಸಿದರು, ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಹೇಮಂತ್ ಕುಮಾರ್. ಜೆ.ಎಸ್ ಪವರ್ ಟಿವಿ ತುಮಕೂರು.

RELATED ARTICLES

Related Articles

TRENDING ARTICLES