ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದಾರೆ. ಭಾರತಕ್ಕೆ ಎರಡೆರಡು ವರ್ಲ್ಡ್ ಕಪ್ ತಂದುಕೊಟ್ಟಿದ್ದರು. 2007 ರ ಚೊಚ್ಚಲ ಟಿ20 ವಿಶ್ವಕಪ್ ಮತ್ತು 2011 ರ ಏಕದಿನ ವಿಶ್ವಕಪ್ ಅನ್ನು ಭಾರತ ಧೋನಿ ನಾಯಕತ್ವದಲ್ಲಿ ಗೆದ್ದಿತ್ತು.
2019 ರ ವಿಶ್ವಕಪ್ ಬಳಿಕ ಧೋನಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಇಂದು ಇನ್ಸ್ಟಾಗ್ರಾಮ್ ನಲ್ಲಿ ನಿವೃತ್ತಿ ಘೋಷಿಸಿ ಪೋಸ್ಟ್ ಮಾಡಿದ್ದಾರೆ.
ಧೋನಿ ದಿಢೀರ್ ನಿವೃತ್ತಿ ಅಭಿಮಾನಿಗಳಿಗೆ ಶಾಕ್ ನೀಡಿದೆ.
ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಧೋನಿ ವಿದಾಯ..!
TRENDING ARTICLES